ಸಿದ್ದಾಪುರ, ಮಾ. ೧೮: ಮನೆಯಲ್ಲಿಟ್ಟಿದ್ದ ೮ ಗ್ರಾಂ ಚಿನ್ನದ ಸರ ಹಾಗೂ ನಗದು ಕಳ್ಳತನವಾಗಿರುವ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟ ನಿವಾಸಿ ತೋಟದ ಲೈನ್ ಮನೆಯಲ್ಲಿ ವಾಸವಿರುವ ಅಯ್ಯಪ್ಪ ಎಂಬವರ ಮನೆಯಲ್ಲಿ ಇಟ್ಟಿದ್ದ ಎಂಟು ಗ್ರಾಂ ಚಿನ್ನದ ಸರ ಕಳ್ಳತನವಾಗಿರುವ ಕುರಿತು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಲ್ಲದೆ ನಗದು ಅಂದಾಜು ರೂ. ೫ ಸಾವಿರ ಕಳ್ಳತನ ಆಗಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಬೆರಳಚ್ಚು ತಜ್ಞರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.