ಸಿದ್ದಾಪುರ, ಮಾ. ೧೮: ಕೊಡಗು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯ ಸಿಂಚನದಿAದ ತಂಪಾದ ವಾತಾವರಣದೊಂದಿಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ರಾಜ್ಯದಲ್ಲೇ ಹೆಚ್ಚು ಮಳೆ ಸುರಿಯುವ ಕೊಡಗು ಜಿಲ್ಲೆಯಲ್ಲಿ ಮಳೆ ಇಲ್ಲದೆ ಕುಡಿಯುವ ನೀರಿಗೂ ಪರದಾಡುವಂತೆ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೇರಿ ತವರಿನಲ್ಲಿ ಮಳೆ ಇಲ್ಲದೆ ನೀರಿಗಾಗಿ ಹಾಹಾಕಾರ ಎದುರಾಗಿತ್ತು. ನದಿಗಳಲ್ಲೂ ನೀರಿಲ್ಲದೆ ಬರಡಾಗಿದ್ದವು.

ಮಳೆ ಇಲ್ಲದೆ ಕುಡಿಯುವ ನೀರಿಗೂ, ಪ್ರಾಣಿಗಳಿಗೂ, ಕೃಷಿ ಭೂಮಿಗೂ ಸಮಸ್ಯೆ ಎದುರಾಗಿತ್ತು. ಅರಣ್ಯದಲ್ಲಿ ಪ್ರಾಣಿಪಕ್ಷಿಗಳಿಗೆ ನೀರಿಲ್ಲದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು.

ಇದೇ ರೀತಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿತ್ತು. ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದ ಜಿಲ್ಲೆಯ ಹಲವಡೆ ಇದೀಗ ವರ್ಷದ ಮೊದಲ ಮಳೆಯಿಂದ ತಂಪಾದ ವಾತಾವರಣ ಕಂಡುಬAದಿದೆ. -ಎಸ್.ಎಂ. ಮುಬಾರಕ್