ಸೋಮವಾರಪೇಟೆ, ಮಾ. ೧೮: ಸರ್ಕಾರಿ ಶಾಲೆಗಳ ಉಳಿವಿನ ದೃಷ್ಟಿಯಿಂದ ಸಮೀಪದ ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯ ಮಸಗೋಡು-ತಣ್ಣೀರುಹಳ್ಳ ಸರ್ಕಾರಿ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಆವರಣದಲ್ಲಿ ಆಯೋಜನೆಗೊಂಡಿದ್ದ ಪೋಷಕರು, ಶಾಲಾ ಅಭಿವೃದ್ಧಿ ಸಮಿತಿ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರನ್ನು ಒಳಗೊಂಡAತೆ ಜರುಗಿದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ನೂರಾರು ವಿದ್ಯಾರ್ಥಿಗಳು ದಾಖಲಾಗುತ್ತಿದ್ದ ತಣ್ಣೀರುಹಳ್ಳ ಸರ್ಕಾರಿ ಶಾಲೆಯಲ್ಲಿ ಪ್ರಸ್ತುತ ೪೦ ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಇದಕ್ಕೆ ಪ್ರಾಥಮಿಕವಾಗಿ ಎಲ್‌ಕೆಜಿ ಹಾಗೂ ಯುಕೆಜಿಯನ್ನು ತೆರೆದು ಶಿಕ್ಷಣ ಆರಂಭಿಸಬೇಕಾದ ಹಿನ್ನೆಲೆ, ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ನಾಗೇಂದ್ರ ಅವರು, ಪೋಷಕರು ತಮ್ಮ ಮಕ್ಕಳಿಗೆ ಆಂಗ್ಲ ಶಿಕ್ಷಣದ ಅವಶ್ಯಕತೆಯಿರುವ ಬಗ್ಗೆ ಮನವಿಗಳನ್ನು ಸಲ್ಲಿಸಿದ್ದು, ಅದರಂತೆ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ತೆರೆಯಲು ಕ್ರಮವಹಿಸಲಾಗುತ್ತಿದೆ ಎಂದರು.

ಗ್ರಾ.ಪA. ಮಾಜಿ ಅಧ್ಯಕ್ಷ ಲೋಕಾನಂದ ಮಾತನಾಡಿ, ಸ್ಥಳೀಯವಾಗಿ ಗುಣಮಟ್ಟದ ಶಿಕ್ಷಣ ಲಭಿಸಿದರೆ ವಳಗುಂದ, ತಣ್ಣೀರುಹಳ್ಳ, ಮಸಗೋಡು, ಅಬ್ಬೂರುಕಟ್ಟೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ವಿನೋದ್‌ಕುಮಾರ್ ಮಾತನಾಡಿದರು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಜಲಜಾಕ್ಷಿ, ಸದಸ್ಯರುಗಳಾದ ಪ್ರವೀಣ್, ಕವಿತ, ಅಶ್ವಿನಿ, ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಉಷಾ ರವೀಂದ್ರ, ಅರೆಯೂರು ಸಂದೀಪ್, ಹೆಚ್.ಕೆ. ಲೋಕೇಶ್, ರಫೀಕ್, ದಿವಾಕರ, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಪ್ಪ, ಶಾಲಾ ಮುಖ್ಯೋಪಾ ಧ್ಯಾಯಿನಿ ಶಾಂತಮ್ಮ, ಸಹ ಶಿಕ್ಷಕಿ ವಿಮಲ ಸೇರಿದಂತೆ ಎಸ್‌ಡಿಎಂಸಿ ಸದಸ್ಯರುಗಳು ಉಪಸ್ಥಿತರಿದ್ದರು.