ಮಡಿಕೇರಿ, ಮಾ. ೧೮: ಅತೀ ಸೂಕ್ಷö್ಮ ಪ್ರದೇಶ ಎಂದು ಕರೆಸಿಕೊಳ್ಳುವ ಪಶ್ಚಿಮಘಟ್ಟ ಸಾಲಿನಲ್ಲಿ ಇದೀಗ ನಕ್ಸಲ್ ಭೀತಿ ಸೃಷ್ಟಿಯಾಗಿದೆ. ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗದ ಕಡಮಕಲ್ಲು ಸಮೀಪದ ಕೂಜಿಮಲೆ ಎಂಬಲ್ಲಿ ನಕ್ಸಲ್ ಹೆಜ್ಜೆ ಸಪ್ಪಳ ಕೇಳಿ ಬಂದಿದ್ದು, ಚುನಾವಣೆ ಹೊತ್ತಿನಲ್ಲಿ ಕೆಂಪು ಉಗ್ರರ ನುಸುಳುವಿಕೆಯಿಂದ ಆತಂಕ ಸೃಷ್ಟಿಯಾಗಿದೆ.

ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ದಕ್ಷಿಣ ಕನ್ನಡದ ಸುಬ್ರಹ್ಮಣ್ಯಕ್ಕೆ ಹತ್ತಿರವಿರುವ ಕೂಜಿಮಲೆಯಲ್ಲ್ಲಿ ೮ ನಕ್ಸಲರ ತಂಡ ಕಾಣಿಸಿಕೊಂಡಿದ್ದು, ಕೂಜಿಮಲೆಯ ಕಲ್ಮಕಾರು ಎಂಬಲ್ಲಿ ಅಂಗಡಿಯೊAದರಲ್ಲಿ ರೂ.೩,೫೦೦ಕ್ಕೆ ದಿನಸಿ ವಸ್ತುಗಳನ್ನು ಖರೀದಿಸಿ ತೆರಳಿದ್ದಾರೆ. ಆರು ಪುರುಷರು, ಇಬ್ಬರು ಮಹಿಳೆಯರು ಶಸ್ತçಸಜ್ಜಿತರಾಗಿ ಬಂದಿದ್ದ ಹಿನ್ನೆಲೆ ನಕ್ಸಲರು ಎಂಬ ಸಂಶಯ ವ್ಯಕ್ತವಾಗಿ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪೊಲೀಸರು ನಕ್ಸಲ್ ನಿಗ್ರಹ ದಳಕ್ಕೆ (ಎ.ಎನ್.ಎಫ್.) ಮಾಹಿತಿ ನೀಡಿದ್ದು, ಕಾರ್ಕಳದಿಂದ ಅಧಿಕಾರಿಗಳು ೩ಮೂರನೇ ಪುಟಕ್ಕೆ

(ಮೊದಲ ಪುಟದಿಂದ) ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಕೂಂಬಿAಗ್‌ಗೆ ಮುಂದಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನಕ್ಸಲ್ ನಿಗ್ರಹ ದಳದೊಂದಿಗೆ ತನಿಖೆ ಮುಂದುವರೆಸಿದ್ದಾರೆ.

ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೂಜಿಮಲೆಯಲ್ಲಿ ಭಾನುವಾರ ಸಂಜೆ ಕಾಣಿಸಿಕೊಂಡ ಈ ನಕ್ಸಲರ ತಂಡವು ಬೇರೆ ಕಡೆ ಸಂಚರಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸುತ್ತ ರಬ್ಬರ್ ಎಸ್ಟೇಟ್ ಇರುವ ಕಾರಣ ನಕ್ಸಲರು ಎಸ್ಟೇಟ್ ಮೂಲಕ ಅರಣ್ಯದೊಳಗೆ ತೆರಳಿರುವ ಸಂಶಯ ಮೂಡಿದೆ.

ಸುದ್ದಿ ತಿಳಿದು ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ ತಂಡ ಆಗಮಿಸಿ, ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿAಗ್ ಆರಂಭಿಸಿದೆ. ಅಲ್ಲದೆ, ತಾವುಗಳು ಅರಣ್ಯ ಇಲಾಖೆ ಸಿಬ್ಬಂದಿಗಳು ಎಂದು ನಕ್ಸಲರು ಸ್ಥಳೀಯರೊಂದಿಗೆ ಪರಿಚಯಿಸಿ ಕೊಂಡಿರುವುದಾಗಿಯೂ ಹೇಳಲಾಗಿದೆ.

ಸುಳ್ಯ ತಾಲೂಕಿನ ಗುತ್ತಿಗಾರು, ಕೊಲ್ಲಮೊಗರು, ಕಲ್ಮಕಾರು ಪ್ರದೇಶದವರೆಗೂ ಕೂಜಿಮಲೆ ರಬ್ಬರ್ ಎಸ್ಟೇಟ್ ವ್ಯಾಪಿಸಿದೆ. ೨೦೧೨ರಲ್ಲಿ ಕಾಲೂರು ಗ್ರಾಮದಲ್ಲಿ ನಕ್ಸಲರು ಪ್ರತ್ಯಕ್ಷಗೊಂಡಿದ್ದರು. ನಂತರ, ೨೦೧೮ರ ಫೆಬ್ರವರಿ ತಿಂಗಳಲ್ಲಿ ಇದೇ ವ್ಯಾಪ್ತಿಯ ಸಂಪಾಜೆ ಗುಡ್ಡೆಗದ್ದೆಯಲ್ಲೂ ನಕ್ಸಲರು ಕಾಣಿಸಿಕೊಂಡಿದ್ದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತೀ ಬಾರಿಯೂ ಕೊಡಗು ಜಿಲ್ಲೆಯ ಗಡಿ ಪ್ರದೇಶದಲ್ಲಿ ನಕ್ಸಲರ ಚಲನವಲನಗಳು ಗೋಚರಿಸುತ್ತವೆ.

ಶನಿವಾರ ಸಂಜೆ ಸುಳ್ಯ ಮತ್ತು ಕೊಡಗು ಗಡಿಪ್ರದೇಶವಾದ ಕೂಜಿಮಲೆಗೆ ಬಂದಿದ್ದ ನಾಲ್ವರು ಅಪರಿಚಿತರು ವಾಂಟೆಡ್ ಲಿಸ್ಟ್ ನಲ್ಲಿರುವ ನಕ್ಸಲರೇ ಎಂಬ ಮಾಹಿತಿ ಪೊಲೀಸ್ ಮತ್ತು ನಕ್ಸಲ್ ನಿಗ್ರಹ ಪಡೆಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿAಗ್ ಕಾರ್ಯಾ ಚರಣೆ ಮುಂದುವರಿ ಯುತ್ತಿದೆ. ನಕ್ಸಲರು ಕೂಜಿಮಲೆಯ ಅಂಗಡಿಗೆ ಬಂದು ದಿನಸಿ ಖರೀದಿಸಿ ತೆರಳಿದ್ದಾರೆ ಎಂಬ ಮಾಹಿತಿ ಬಹಿರಂಗವಾಗು ತ್ತಿದ್ದಂತೆ ಭಾನುವಾರ ರಾತ್ರಿ ವೇಳೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಸೋಮವಾರ ಬೆಳಿಗ್ಗೆ ಮಡಿಕೇರಿಯ ಗುಪ್ತಚರ ಎಸ್.ಐ. ನವೀನ್ ಕೋಟ್ಯಾನ್ ಮತ್ತು ಸಿಬ್ಬಂದಿಗಳು ಬಂದರು. ಕಾರ್ಕಳ ಹಾಗೂ ಭಾಗಮಂಡಲದಿAದ ಆಗಮಿಸಿದ ನಕ್ಸಲ್ ನಿಗ್ರಹ ಪಡೆಯ ತಂಡಗಳು ಮೂರು ಭಾಗಗಳಿಂದ ಕೂಂಬಿAಗ್ ಕಾರ್ಯಾಚರಣೆ ಆರಂಭಿಸಿತು. ಸ್ವಲ್ಪ ಹೊತ್ತಿನಲ್ಲಿ ಕಾರ್ಕಳದಿಂದ ನಕ್ಸಲ್ ನಿಗ್ರಹ ಪಡೆಯ ಡಿವೈಎಸ್ಪಿ ರಾಘವೇಂದ್ರ ಆಗಮಿಸಿದರು. ಮಡಿಕೇರಿಯಿಂದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಮಡಿಕೇರಿ ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ ಮತ್ತಿತರ ಅಧಿಕಾರಿಗಳು, ಕೇಂದ್ರ ಗುಪ್ತಚರ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿದ್ದರು.