ಕೂಡಿಗೆ, ಮಾ. ೧೯: ತೊರೆನೂರು ಶನೇಶ್ಚರ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ, ಕನ್ನಡಸಿರಿ ಸ್ನೇಹ ಬಳಗ ಸಂಯುಕ್ತ ಆಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬ ಅಂಗವಾಗಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವೀರಾಜಪೇಟೆಯ ನಾಟ್ಯಾಂಜಲಿ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.

ದ್ವಿತೀಯ ಸ್ಥಾನವನ್ನು ಕೂಡಿಗೆಯ ಕ್ರಿಯೇಟಿವ್ ಅಕಾಡೆಮಿ ತಂಡ ಪಡೆದರೆ, ತೃತೀಯ ಸ್ಥಾನವನ್ನು ಕ್ವೀನ್ಸ್ ಆಫ್ ಕೂರ್ಗ್ಸ್ ತಂಡ ಪಡೆದುಕೊಂಡಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಕೊಡ್ಲಿಪೇಟೆ ಕಿರುಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮಿ ನೆರವೇರಿಸಿ ಮಾತನಾಡಿ, ಸಮಾಜದಲ್ಲಿ ಮಾನವೀಯತೆ ಮನೆ ಮಾಡಿದರೆ ಮಾತ್ರ ಸಮಸ್ಯೆಗಳ ಪರಿಹಾರ ಸಾಧ್ಯ. ಧಾರ್ಮಿಕ ಆಚರಣೆಗಳ ಸತ್ಪಜೆ ನಿರ್ಮಾಣಕ್ಕೆ ಅಡಿಪಾಯವಾಗಲಿದೆ ಎಂದರು.

ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತÀರ್ ಗೌಡ ಮಾತನಾಡಿ, ಗ್ರಾಮೀಣ ಪರಂಪರೆ ಅರಿತು, ಹಿರಿಯರು ನಡೆಸಿಕೊಂಡು ಬಂದ ಸಂಪ್ರದಾಯವನ್ನು ಮುಂದು ವರೆಸಿಕೊಂಡು ಹೋದರೆ ಸಂಸ್ಕೃತಿ ಉಳಿವು ಸಾಧ್ಯ ಎಂದರು.

ದಿವ್ಯ ಸಾನಿಧ್ಯವನ್ನು ತೊರೆನೂರು ವಿರಕ್ತ ಮಠ ಮಲ್ಲೇಶ ಸ್ವಾಮಿ ವಹಿಸಿದ್ದÀರು. ಕೊಡಗು ವಿಶ್ವವಿದ್ಯಾಲಯ ಕನ್ನಡ ಪ್ರಾಧ್ಯಾಪಕ ಡಾ. ಜಮೀರ್ ಅಹಮದ್ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ದೇವಾಲಯ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣಗೌಡ ವಹಿಸಿದ್ದರು. ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಕಾಂಗ್ರೆಸ್ ಮುಖಂಡ, ನಟೇಶ್ ಗೌಡ, ಸೂರ್ಯೋದಯ ಸಮಿತಿಯ ಅಧ್ಯಕ್ಷ ಜಗದೀಶ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ನಾಗೇಶ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾ ಕುಮಾರಿ, ದೇವಾಲಯ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಶಿರಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್, ಸೇರಿದಂತೆ ಸಮಿತಿಯ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.