ಮಡಿಕೇರಿ, ಮಾ. ೧೯: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಬರಹ ಮತ್ತು ಅಗೌರವ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ ಹರಿಬಿಟ್ಟಿರುವ ಕುರಿತು ಜಿಲ್ಲಾ ಬಿಜೆಪಿ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿಬಿಟ್ಟಿರುವ ಐ.ಜಿ. ಚಿನ್ನಪ್ಪ ಎಂಬವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ನೇತೃತ್ವದಲ್ಲಿ ದೂರನ್ನು ಸಲ್ಲಿಸಿ, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.