ನಾಪೋಕ್ಲು, ಮಾ. ೧೯: ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರಾದ ಕೃತಿಕಾರ ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದ್ದು ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧ್ಯಕ್ಷರು ಸೂಚನೆ ನೀಡಿದರು.
ವಿದ್ಯುತ್ ಸಮಸ್ಯೆ ಕುರಿತು ಸೆಸ್ಕ್ ಅಭಿಯಂತರರು ಮಾಹಿತಿ ನೀಡಿದರು, ಪಂಚಾಯಿತಿ ವ್ಯಾಪ್ತಿಯಲ್ಲಿ ಟ್ರಾನ್ಸ್ಫಾರ್ಮರ್ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ಸದಸ್ಯರಾದ ಹಮೀದ್, ಮೊನ್ನಪ್ಪ, ಟೈನಿ ಗಮನಸೆಳೆದರು. ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಕುರಿತು ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ ಅಭಿಯಂತರ ರಘು ಮಾಹಿತಿ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರ ವಿಶೇಷ ಮುತುವರ್ಜಿಯಿಂದ ಹೊದ್ದೂರು ಗ್ರಾಮ ಪಂಚಾಯಿತಿಗೆ ಒಂದು ಕೋಟಿ ಎಪ್ಪತ್ತು ಲಕ್ಷ ರೂಪಾಯಿಗಳ ವಿವಿಧ ರಸ್ತೆ ಕಾಮಗಾರಿಗಳು ಮಂಜೂರಾಗಿದೆ ಹಾಗೂ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಅಧ್ಯಕ್ಷರಾದ ಹಂಸ ಮಾಹಿತಿ ನೀಡಿದರು. ಹೊದ್ದೂರು ಕಬಡಕೇರಿ ಸರ್ವೆ ನಂಬರ್ ೭೭/೨ ಹಾಗೂ ೮೮/೧ ಆಶ್ರಯ ನಿವೇಶನ ಯೋಜನೆ ಅಡಿಯಲ್ಲಿ ೬೦ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಕಂದಾಯ ಇಲಾಖೆಯ ಎಲ್ಲಾ ಕಾರ್ಯಗಳಿಗೂ ಸ್ಪಂದಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಪಾಟೀಲ್ ಅವರ ಕಾರ್ಯವೈಖರಿ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಂಚಾಯಿತಿ ವ್ಯಾಪ್ತಿಯ ಅನುದಾನ ರಹಿತ ಶಾಲೆಗಳ ಕಟ್ಟಡ ತೆರಿಗೆ ಬೇರೆ ಗ್ರಾಮ ಪಂಚಾಯಿತಿಗಳಿಗಿAತಲೂ ಹೆಚ್ಚುವರಿಯಾಗಿ ವಿಧಿಸುತ್ತಿರುವ ಬಗ್ಗೆ ಗ್ರಾಮಸ್ಥರಾದ ಮೊಹಮ್ಮದ್ ಸಭೆಯ ಗಮನ ಸೆಳೆದರು ಈ ಕುರಿತು ಪಿಡಿಓ ಅಬ್ದುಲ್ಲಾ ಮಾಹಿತಿ ನೀಡಿ ಗ್ರಾಮ ಪಂಚಾಯಿತಿ ತೆರಿಗೆ ನಿಯಮಾವಳಿಗಳ ಪ್ರಕಾರ ಈ ಹಿಂದಿನAತೆ ತೆರಿಗೆ ವಸೂಲಿ ಮಾಡುತ್ತಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ನಿಯಮ ೨೦೨ರ ಅನ್ವಯ ಮೇಲ್ಮನವಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
ಈ ಬಗ್ಗೆ ಮುಂದಿನ ಸಭೆಯಲ್ಲಿ ಪರಿಶೀಲಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟೆಕಾಡು ಮತ್ತು ಹೊದವಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಗೆ ಪೂರಕವಾಗಿರುವ ಸ್ಮಾರ್ಟ್ ಟಿವಿಯನ್ನು ಹಾಗೂ ಪಂಚಾಯಿತಿ ವ್ಯಾಪ್ತಿಯ ೧೨ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸ್ನೇಹಿ ಪೀಠೋಪಕರಣಗಳು ಹಾಗೂ ಅಂಗನವಾಡಿ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಗ್ರಾಮಸಭೆಯಲ್ಲಿ ವಿತರಿಸಲಾಯಿತು.
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಮೊನ್ನಪ್ಪ, ಪಂಚಾಯಿತಿ ಸದಸ್ಯರಾದ ಎಂ.ಬಿ. ಹಮೀದ್, ಕಡ್ಲೆರ ಟೈನಿ, ಪಾರ್ವತಿ, ಕೆ.ಆರ್. ಅನಿತಾ, ಲಕ್ಷಿö್ಮ, ಮೈದು, ಚೌರಿರ ಅನಿತಾ, ಚೌರಿರ ನವೀನ್, ಸರಸು, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.