ಬಿಹಾರದಲ್ಲಿ ಸೀಟು ಹಂಚಿಕೆ ಅಂತಿಮ
ನವದೆಹಲಿ, ಮಾ. ೧೮: ಮುಂಬರುವ ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ರಾಷ್ಟಿçÃಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್ಡಿಎ) ಸೀಟು ಹಂಚಿಕೆಯನ್ನು ಅಂತಿಮಗೊಳಿಸಿರುವುದಾಗಿ ಸೋಮವಾರ ಪ್ರಕಟಿಸಿದೆ. ಒಟ್ಟು ೪೦ ಲೋಕಸಭಾ ಕ್ಷೇತ್ರಗಳ ಬಿಹಾರ ಸಿಎಂ ನಿತೀಶ್ ಕುಮಾರ್ ನಾಯಕತ್ವದ ಜೆಡಿಯು ಪಕ್ಷವು ೧೬, ಬಿಜೆಪಿ ೧೭ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಎಲ್ಜೆಪಿಯು ೫ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಎನ್ಡಿಎ ಭಾಗವಾಗಿರುವ ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟಿçÃಯ ಲೋಕ ಮೋರ್ಚಾ ಪಕ್ಷಗಳು ತಲಾ ಒಂದೊAದು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.
ಈಶ್ವರಪ್ಪ ಮುನಿಸು ಶಮನಕ್ಕೆ ಯತ್ನ - ವಿಜಯೇಂದ್ರ
ಶಿವಮೊಗ್ಗ, ಮಾ. ೧೮: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮುನಿಸಿನ ವಿಚಾರದಲ್ಲಿ ಎಲ್ಲವೂ ಸರಿಯಾಗುತ್ತದೆ. ಸರಿಪಡಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಅವರು ರಾಜ್ಯಾದ್ಯಂತ ಸೈಕಲ್ನಲ್ಲಿ ಸುತ್ತಾಡಿ ಕಟ್ಟಿದ ಫಲವಾಗಿ ಪಕ್ಷ ರಾಜ್ಯದಲ್ಲಿ ಇಂದು ಬಲಿಷ್ಠವಾಗಿದೆ. ಯಡಿಯೂರಪ್ಪ ಪಕ್ಷದ ಕುತ್ತಿಗೆ ಹಿಸುಕಿದ್ದಾರೋ ಇಲ್ಲ, ಎತ್ತರಕ್ಕೆ ಬೆಳೆಸಿದ್ದಾರೋ ಎಂಬುದು ಚುನಾವಣೆ ಮುಗಿದ ಮೇಲೆ ಗೊತ್ತಾಗುತ್ತದೆ ಎಂದರು.
ರಾಹುಲ್ ವಿರುದ್ಧ ಶಿವಮೊಗ್ಗದಲ್ಲಿ ಮೋದಿ ವಾಗ್ದಾಳಿ
ಶಿವಮೊಗ್ಗ, ಮಾ. ೧೮: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ÷್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಕ್ತಿಯನ್ನು ನಿರ್ನಮಾ ಮಾಡುವುದಕ್ಕಾಗಿ ಇಂಡಿಯಾ ಮೈತ್ರಿಕೂಟವನ್ನು ರಚಿಸಲಾಯಿತು ಎಂಬ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಅವರು ಶಕ್ತಿಯನ್ನು ನಾಶ ಮಾಡಲು ಯತ್ನಿಸಿದರೆ, ನಮ್ಮದು ಶಕ್ತಿಯನ್ನು ಪೂಜಿಸುವ ಸಂಕಲ್ಪವಾಗಿದೆ ಎಂದು ಮೋದಿ ಹೇಳಿದ್ದಾರೆ. ಭಾನುವಾರ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮುಕ್ತಾಯದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಮೋದಿ ವಿರುದ್ಧ ನಮ್ಮ ಹೋರಾಟವು ವೈಯಕ್ತಿಕ ಮಟ್ಟದಲ್ಲಿಲ್ಲ. ಮೋದಿ, ಶಕ್ತಿಗಾಗಿ (ಅಧಿಕಾರಕ್ಕಾಗಿ) ಇರುವ ಮುಸುಕು ಎಂದು ಹೇಳಿದ್ದರು. ಇದಕ್ಕೂ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಶಿವಾಜಿ ಪಾರ್ಕ್ನಿಂದ ಶಕ್ತಿಯನ್ನು ಹೊರಹಾಕುವ ಘೋಷಣೆಯನ್ನು ಕೇಳಿದಾಗ, ಅದು ಬಾಳ್ ಠಾಕ್ರೆ ಅವರ ಆತ್ಮಕ್ಕೆ ಎಷ್ಟು ನೋವುಂಟು ಮಾಡುತ್ತದೆ ಎಂದು ನಾನು ಯೋಚಿಸಿದೆ. ಪ್ರತಿ ಮಗು ಜೈ ಭವಾನಿ, ಜೈ ಶಿವಾಜಿ ಎಂಬ ಮಂತ್ರದೊAದಿಗೆ ಬೆಳೆಯುವ ಶಿವಾಜಿ ಪಾರ್ಕ್ನಲ್ಲಿ ಶಕ್ತಿ ನಿರ್ಮೂಲನೆಯ ಘೋಷಣೆಯನ್ನು ಮಾಡಲಾಗಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ.
ನಮಾಜ್ ವೇಳೆ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ
ಬೆಂಗಳೂರು, ಮಾ. ೧೮: ನಮಾಜ್ ಮಾಡುವ ಸಮಯದಲ್ಲಿ ಹನುಮಾನ್ ಚಾಲೀಸ್ ಹಾಕಿದ ಎಂದು ಆರೋಪಿಸಿ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿರುವ ನಗರತ್ಪೇಟೆಯಲ್ಲಿ ಈ ಘಟನೆ ಸಂಭವಿಸಿದ್ದು, ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇದೇ ಸ್ಥಳದಲ್ಲಿ ಸಂತ್ರಸ್ತ ಮುಖೇಶ್ ಮೊಬೈಲ್ ಸರ್ವೀಸ್ ಅಂಗಡಿ ಹೊಂದಿದ್ದಾನೆ.
ಸಚಿವರಾಗಿ ಪೊನ್ನುಡಿ ನೇಮಕಕ್ಕೆ ರಾಜ್ಯಪಾಲರ ನಕಾರ
ನವದೆಹಲಿ, ಮಾ. ೧೭: ಡಿಎಂಕೆಯ ಹಿರಿಯ ನಾಯಕ ಕೆ. ಪೊನ್ಮುಡಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಶಿಫಾರಸಿನಂತೆ ಸಚಿವರನ್ನಾಗಿ ನೇಮಿಸಲು ರಾಜ್ಯಪಾಲ ಆರ್.ಎನ್. ರವಿ ಅವರು ನಿರಾಕರಿಸಿದ್ದು, ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ. ರಾಜ್ಯಪಾಲರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ನಿರಾಕರಿಸಿದ್ದರು ಮತ್ತು ಇದು ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ತಮಿಳುನಾಡು ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರ ಮನವಿಯನ್ನು ಪರಿಗಣಿಸಿದ್ದು, ಈ ವಿಷಯದಲ್ಲಿ ಸ್ವಲ್ಪ ತುರ್ತುಸ್ಥಿತಿಯಿದ್ದು, ಅದನ್ನು ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಹೇಳಿದ್ದಾರೆ. ದಯವಿಟ್ಟು ಈ ಕುರಿತ ವಿವರಣೆಯನ್ನು ನನಗೆ ಇಮೇಲ್ ಮೂಲಕ ಕಳುಹಿಸಿ. ನಾನು ಇಮೇಲ್ ಅನ್ನು ಪರಿಶೀಲಿಸುತ್ತೇನೆ ಎಂದು ಸಿಜೆಐ, ಸಿಂಘ್ವಿಗೆ ಹೇಳಿದರು. ಪೊನ್ಮುಡಿ ನೇಮಕ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದ ರಾಜ್ಯಪಾಲರು, ಪೊನ್ಮುಡಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್, ಪೊನ್ಮುಡಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಮಧ್ಯಂತರ ಆದೇಶ ನೀಡಿದೆಯಷ್ಟೇ ಎಂದು ಹೇಳಿದ್ದರು. ಇತ್ತೀಚೆಗೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಪೊನ್ಮುಡಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ತಮಿಳುನಾಡು ಸಿಎಂ ಶಿಫಾರಸು ಮಾಡಿದ್ದರು.
ಅಧಿಕಾರಿಗಳನ್ನು ಬದಲಾಯಿಸಿದ ಚುನಾವಣಾ ಆಯೋಗ
ನವದೆಹಲಿ, ಮಾ. ೧೮: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಇಂದು ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಹೆಚ್ಚುವರಿಯಾಗಿ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನೂ ಚುನಾವಣಾ ಆಯೋಗ ಬದಲಾಯಿಸಿದೆ. ಜತೆಗೆ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ಬದಲಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಸಮಿತಿಯು ಬೃಹನ್ಮುಂಬೈ ಮುನ್ಸಿಪಲ್ ಕಮಿಷನರ್ ಇನ್ಸಾಲ್ ಸಿಂಗ್ ಚಾಹಲ್, ಹೆಚ್ಚುವರಿ ಆಯುಕ್ತರು ಮತ್ತು ಉಪ ಆಯುಕ್ತರನ್ನು ಬದಲಾಯಿಸುವಂತೆ ಆದೇಶಿಸಿದೆ. ಮೂರು ವರ್ಷ ಪೂರೈಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಯೋಗವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಆದರೆ, ಕೆಲವು ನಗರಸಭೆ ಪೌರಾಯುಕ್ತರು ಮತ್ತು ಕೆಲವು ಹೆಚ್ಚುವರಿ ಮತ್ತು ಉಪ ಪೌರಾಯುಕ್ತರಿಗೆ ಸಂಬAಧಿಸಿದAತೆ ಮಹಾರಾಷ್ಟçವು ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ವರದಿಯಾಗಿದೆ.
ಶಾಸಕರ ಅನರ್ಹ ಆದೇಶಕ್ಕೆ ತಡೆ ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮಾ. ೧೮: ರಾಜ್ಯಸಭಾ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ೬ ಮಂದಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ವಿಧಾನಸಭಾಧ್ಯಕ್ಷರು ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು, ಈ ಕುರಿತಂತೆ ೪ ವಾರಗಳಲ್ಲಿ ಪ್ರತಿಕ್ರಿಯೆ ಕೇಳಿ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರಿಗೆ ನೋಟೀಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಬಾಕಿ ಇರುವಾಗ, ಅನರ್ಹ ಶಾಸಕರು ವಿಧಾನಸಭೆಯ ಕಾರ್ಯ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ೬ ಕ್ಷೇತ್ರಗಳ ಉಪಚುನಾವಣೆಗೆ ಸಂಬAಧಿಸಿದAತೆ ಚುನಾವಣಾ ಆಯೋಗವು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕೆ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದು ಪೀಠ ಹೇಳಿದ್ದು, ಪ್ರಕರಣದ ವಿಚಾರಣೆಯನ್ನು ಮೇ ೬ಕ್ಕೆ ಮುಂದೂಡಿದೆ.