ವೀರಾಜಪೇಟೆ, ಮಾ. ೨೦: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಗ್ಗರಿಕಾಡುವಿನಲ್ಲಿ ಮಹಾ ಶಿವರಾತ್ರಿಯ ಅಂಗವಾಗಿ ನವೋದಯ ಯುವಕ ಸಂಘದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮದಲ್ಲಿ ಸಂಸ್ಕöÈತಿಯನ್ನು ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದರು. ನವೋದಯ ಯುವಕ ಸಂಘದ ಅಧ್ಯಕ್ಷÀ ಬಿ.ಎಂ. ದಿನೇಶ್ ಶಿವರಾತ್ರಿ ಪ್ರಾಮುಖ್ಯತೆಯನ್ನು ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಪಿ.ಎನ್. ಶಾರದ ಮತ್ತು ನವೋದಯ ಯುವಕÀ ಸಂಘದ ಉಪಾಧ್ಯಕ್ಷ ಟಿ.ಪಿ ಸುಬ್ಬಯ್ಯ ಉಪಸ್ಥಿತರಿದ್ದರು. ಬಳಿಕ ವಿವಿಧ ಹಲವಾರು ಗ್ರಾಮೀಣ ಕ್ರೀಡಾಕೂಟಗಳು ನಡೆದವು.