ಸಿದ್ದಾಪುರ, ಮಾ. ೨೦: ಚುನಾವಣೆಯ ಹಿನ್ನೆಲೆಯಲ್ಲಿ ಗಡಿಭಾಗದ ಮಾಲ್ದಾರೆ ಚೆಕ್‌ಪೋಸ್ಟ್ನಲ್ಲಿ ಪೊಲೀಸರು ಹಾಗೂ ಇತರ ಇಲಾಖಾಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದಾರೆ.

ಕಳೆದ ಕೆಲವು ತಿಂಗಳಿನಿAದ ಸಿಬ್ಬಂದಿಗಳ ಕೊರತೆ ಹಿನ್ನೆಲೆಯಲ್ಲಿ ಮಾಲ್ದಾರೆ ಚೆಕ್‌ಪೋಸ್ಟ್ಅನ್ನು ಮುಚ್ಚಲಾಗಿತ್ತು. ಈ ಬಗ್ಗೆ ‘ಶಕ್ತಿ’ ವರದಿ ಪ್ರಕಟಿಸಿತ್ತು. ಇದಾದ ನಂತರ ಇದೀಗ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಗಡಿಭಾಗದ ಮಾಲ್ದಾರೆಯ ಚೆಕ್‌ಪೋಸ್ಟ್ನಲ್ಲಿ ಎಲ್ಲಾ ವಾಹನಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಚೆಕ್‌ಪೋಸ್ಟ್ನಲ್ಲಿ ಎರಡು ಪೊಲೀಸ್ ಸಿಬ್ಬಂದಿಗಳು ಹಾಗೂ ಇತರ ಇಲಾಖೆಯ ಈರ್ವರು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಠಾಣಾಧಿಕಾರಿ ರಾಘವೇಂದ್ರ ತಿಳಿಸಿದ್ದಾರೆ.

ಈವರೆಗೂ ಯಾವುದೇ ವಸ್ತುಗಳು ಪತ್ತೆ ಆಗಲಿಲ್ಲ. ಬೆಂಗಳೂರಿನಿAದ ಕೊಡಗು ಜಿಲ್ಲೆಗೆ ಹಾಗೂ ಕೇರಳ ರಾಜ್ಯಕ್ಕೆ ಮೈಸೂರಿನಿಂದ ಪಿರಿಯಾಪಟ್ಟಣ ಮಾರ್ಗವಾಗಿ ಮಾಲ್ದಾರೆ ಮೂಲಕ ಸಿದ್ದಾಪುರ-ವೀರಾಜಪೇಟೆ ಭಾಗಕ್ಕೆ ಅಧಿಕ ವಾಹನಗಳು ಬರುತ್ತಿವೆ. ಈ ಹಿಂದಿನ ಎಲ್ಲಾ ಚುನಾವಣೆಗಳಲ್ಲಿಯು ತಪಾಸಣಾ ಕೇಂದ್ರವನ್ನು ಮಾಲ್ದಾರೆಯಲ್ಲಿ ಪ್ರಾರಂಭ ಮಾಡಲಾಗುತ್ತಿತ್ತು. ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಹಾಗೂ ಇತರ ಇಲಾಖೆಯ ಸಿಬ್ಬಂದಿಗಳು ಹಗಲಿರುಳು ವಾಹನ ತಪಾಸಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ.