ಕೂಡಿಗೆ, ಮಾ. ೨೦: ಕೊಡಗಿನ ಗಡಿ ಭಾಗವಾದ ಶಿರಂಗಾಲ ಗಡಿ ಗೇಟ್‌ನಲ್ಲಿ ಕಟ್ಟುನಿಟ್ಟಾದ ತಪಾಸಣೆಯನ್ನು ಪೊಲೀಸ್ ಮತ್ತು ಕಂದಾಯ ಇಲಾಖೆಯ ಮುಖೇನ ಕೈಗೊಂಡಿದ್ದಾರೆ.
ಶಿರAಗಾಲ - ಹಾಸನ ಹೆದ್ದಾರಿಯ ಮೂಲಕ ಕೊಡಗು ಜಿಲ್ಲೆಗೆ ಪ್ರವೇಶ ಮಾಡುವ ಪ್ರತಿಯೊಂದು ವಾಹನಗಳನ್ನು ನಿಯಮಾನುಸಾರ ವಾಗಿ ತಪಾಸಣೆ ಮಾಡಿ ಬಿಡಲಾಗುತ್ತಿದೆ.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ, ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಶಿರಂಗಾಲದ ಗಡಿ ಗೇಟ್‌ಗೆ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ, ರಾಜೇಶ್, ಗ್ರಾಮಾಂತರ ಠಾಣಾಧಿಕಾರಿ ಮೋಹನ್ ರಾಜ್, ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.