ನಗರತ್ಪೇಟೆಯಲ್ಲಿ ಹಿಂದೂ ಪರ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು, ಮಾ. ೧೯: ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬAಧಿಸಿದAತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾದರು. ಇದರಿಂದಾಗಿ ನಗರತ್ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿAದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು. ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದಾಡಿದ ಬೆಳವಣಿಗೆ ಕೂಡ ಕಂಡು ಬಂದಿತು. ಹಲ್ಲೆಗೊಳಗಾದ ಮುಖೇಶ್ನನ್ನು ಪೊಲೀಸರು ಜೀಪ್ನಲ್ಲಿ ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಪೊಲೀಸ್ ವಾಹನದ ಮುಂದೆ ನಿಂತು ಶಾಸಕ ಸುರೇಶ್ಕುಮಾರ್ ಪ್ರತಿಭಟನೆ ನಡೆಸಿದರು. ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಶಾಸಕ ಸುರೇಶ್ಕುಮಾರ್ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಶಾಲೆ ಮುಂಭಾಗ ಸ್ಫೋಟಕ ಪತ್ತೆ
ಬೆಂಗಳೂರು, ಮಾ. ೧೯: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆ ಮರೆಯುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಸೋಮವಾರ ರಾತ್ರಿ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿಯಲ್ಲಿ ಗಸ್ತಿನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ‘ಟ್ರಾö್ಯಕ್ಟರ್'ನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಸ್ಫೋಟಕ ಇರುವುದು ಪತ್ತೆಯಾಗಿದೆ. ಈ ಸಂಬAಧ ಸ್ಥಳೀಯ ಕಾರ್ಮಿಕರ ಬಳಿಕ ಮಾಹಿತಿ ಕೇಳಿದ್ದು, ಅವರಿಂದ ಸಮಾಧಾನಕರ ಉತ್ತರ ಸಿಕ್ಕಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾವುಕರಾದ ಮೋದಿ
ಸೇಲಂ, ಮಾ. ೧೯: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಸೇಲಂ ಜಿಲ್ಲೆಯಲ್ಲಿ ೧೦ ವರ್ಷಗಳ ಹಿಂದೆ ಹತ್ಯೆಯಾದ ಪಕ್ಷದ ಕಾರ್ಯಕರ್ತನನ್ನು ನೆನೆದು ಭಾವುಕರಾದರು. ಭಾರಿ ಸಂಖ್ಯೆಯಲ್ಲಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ದಿವಂಗತ ಬಿಜೆಪಿ ನಾಯಕ ಕೆ.ಎನ್. ಲಕ್ಷö್ಮಣ್ ಸೇರಿ ಜಿಲ್ಲೆಯಲ್ಲಿ ಪಕ್ಷಕ್ಕಾಗಿ ದುಡಿದ ಮೂವರನ್ನು ನೆನಪಿಸಿಕೊಂಡರು. ದುಷ್ಕರ್ಮಿಗಳಿಂದ ಹತ್ಯೆಯಾದ ಆಡಿಟರ್ ರಮೇಶ್ ಕುರಿತಂತೆ ಮಾತನಾಡುವಾಗ ಭಾವುಕರಾದ ಮೋದಿ, ಕೆಲ ಸಮಯ ಭಾಷಣ ನಿಲ್ಲಿಸಿದರು. ಬಳಿಕ, ಮತ್ತೆ ಭಾಷಣ ಆರಂಭಿಸಿದ ಅವರು, ಪಕ್ಷಕ್ಕಾಗಿ ರಮೇಶ್ ಮಾಡಿದ ಕೆಲಸಗಳನ್ನು ಶ್ಲಾಘಿಸಿದರು. ನಾನು ರಮೇಶ್ ಅವರನ್ನು ಎಂದಿಗೂ ಮರೆಯುವುದಿಲ್ಲ. ಪಕ್ಷಕ್ಕಾಗಿ ಅವರು ಹಗಲು-ರಾತ್ರಿ ಎನ್ನದೆ ಬಹಳಷ್ಟು ಶ್ರಮಿಸಿದ್ದಾರೆ. ಅವರೊಬ್ಬ ಒಳ್ಳೆಯ ವಾಗ್ಮಿಯಾಗಿದ್ದರು. ಆದರೆ, ಅವರನ್ನು ಹತ್ಯೆ ಮಾಡಲಾಯಿತು. ಇಂದು ಅವರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದು ಮೋದಿ ಹೇಳಿದರು.
ದೇಶ ಬದಲಾವಣೆ ಬಯಸುತ್ತಿದೆ - ಖರ್ಗೆ
ನವದೆಹಲಿ, ಮಾ. ೧೯: ಇಡೀ ದೇಶವೇ ಬದಲಾವಣೆಯನ್ನು ತೀವ್ರವಾಗಿ ಬಯಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲುö್ಯಸಿ) ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇಂದು ನಡೆದ ಸಿಡಬ್ಲುö್ಯಸಿ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಗೆ ಅಂತಿಮ ರೂಪ ನೀಡಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಪ್ರಣಾಳಿಕೆಗೆ ಪಕ್ಷದ ಅಧ್ಯಕ್ಷ ಖರ್ಗೆ ಅವರು ಅನುಮೋದನೆ ನೀಡಿದ ಬಳಿಕ ಬಿಡುಗಡೆ ದಿನಾಂಕವನ್ನು ಘೋಷಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೊದಲು ಸಿಡಬ್ಲುö್ಯಸಿ ಸಭೆಯಲ್ಲಿ ಮಾತನಾಡಿದ ಖರ್ಗೆ, ಇಡೀ ದೇಶವೇ ಬದಲಾವಣೆ ಬಯಸುತ್ತಿದೆ. ನಮ್ಮ ಪ್ರಣಾಳಿಕೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರಚಾರ ಗಿಟ್ಟಿಸುತ್ತದೆ ಎಂಬುದನ್ನು ಖಾತ್ರಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದೇಶದ ಹಳ್ಳಿಗಳ ಮನೆ ಮನೆಗೂ ನಮ್ಮ ಭರವಸೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ನೀಡುವ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಇದೇ ಕಾರಣಕ್ಕಾಗಿ ೧೯೨೬ರಿಂದ ಕಾಂಗ್ರೆಸ್ನ ಪ್ರಣಾಳಿಕೆಯನ್ನು ‘ವಿಶ್ವಾಸ ಹಾಗೂ ಬದ್ಧತೆಯ ದಾಖಲೆ'ಯಾಗಿ ಪರಿಗಣಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಸಿಎಎ ತಡೆ-ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ನವದೆಹಲಿ, ಮಾ. ೧೯: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳ ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮೂರು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಏಪ್ರಿಲ್ ೯ಕ್ಕೆ ಮುಂದೂಡಿದೆ. ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ, ೨೦ ಅರ್ಜಿಗಳ ಕುರಿತಂತೆ ಪ್ರತಿಕ್ರಿಯಿಸಲು ೪ ವಾರಗಳ ಸಮಯಾವಕಾಶ ಕೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆ-೨೦೧೯ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡುವವರೆಗೂ ಕಾಯ್ದೆಯ ನಿಯಮಗಳ ಜಾರಿಗೆ ತಡೆ ನೀಡುವಂತೆ ಈ ಅರ್ಜಿಗಳಲ್ಲಿ ಕೋರಲಾಗಿದೆ. ‘ಸಿಎಎ ಕಾಯ್ದೆಯು ಯಾರೊಬ್ಬರ ಪೌರತ್ವವನ್ನೂ ಕಸಿದುಕೊಳ್ಳುವುದಿಲ್ಲ' ಎಂದು ಮೆಹ್ರಾ ಪೀಠದ ಗಮನಕ್ಕೆ ತಂದರು.