ಚೆಯ್ಯAಡಾಣೆ, ಮಾ. ೨೦ : ಸ್ಕೂಟರ್ ಮತ್ತು ಪಿಕ್ ಅಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಾಪೋಕ್ಲು ಹಳೆ ತಾಲೂಕು ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಹಳೆ ತಾಲೂಕು ಕಡೆಯಿಂದ ನಾಪೋಕ್ಲುವಿಗೆ ತೆರಳುತ್ತಿದ್ದ ಪಿಕಪ್ ವಾಹನಕ್ಕೆ ನಾಪೋಕ್ಲುವಿನಿಂದ ಅಯ್ಯಂಗೇರಿಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಇಬ್ಬಾಗವಾಗಿದ್ದು, ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸವಾರನಿಗೆ ಕಾಲು ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಗಾಯಾಳುವಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.