ಸೋಮವಾರಪೇಟೆ, ಮಾ. ೨೧: ಸಮೀಪದ ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ತಾ. ೨೩ ಮತ್ತು ೨೪ರಂದು ಯಡೂರು ಬಿಟಿಸಿಜಿ ಕಾಲೇಜು ಮೈದಾನದಲ್ಲಿ ೨೪ನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ.

ತಾ. ೨೩ರಂದು ಬೆಳಿಗ್ಗೆ ೯.೩೦ಕ್ಕೆ ಕ್ರೀಡಾಕೂಟದ ಉದ್ಘಾಟನೆಯನ್ನು ಯಡೂರು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ. ಭಾನುಪ್ರಕಾಶ್ ನೆರವೇರಿಸಲಿದ್ದು, ಕಾಲೇಜು ಪ್ರಾಂಶುಪಾಲೆ ಧನಲಕ್ಷಿö್ಮ, ಗ್ರಾ.ಪಂ. ಸದಸ್ಯೆ ಲಲಿತಾ ರಾಮಣ್ಣ, ಉಪಾಧ್ಯಕ್ಷೆ ರೇಣುಕಾ ವೆಂಕಟೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ತಾ. ೨೪ರಂದು ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗ್ರಾ.ಪಂ. ಸದಸ್ಯ ರಘು, ಚೌಡ್ಲು ವಿಎಸ್‌ಎಸ್‌ಎನ್ ಉಪಾಧ್ಯಕ್ಷ ವೈ.ಎಂ. ನಾಗರಾಜು, ನಿರ್ದೇಶಕ ದಳವಾಯಿ ರಾಜು, ಉದ್ಯಮಿಗಳಾದ ಹರಪಳ್ಳಿ ರವೀಂದ್ರ, ಅರುಣ್ ಕಾಳಪ್ಪ, ಗಿರೀಶ್ ಮಲ್ಲಪ್ಪ, ಕೆ.ಟಿ. ಸತೀಶ್, ಉದಯ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ ೨೨ ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ೧೫ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲೂ ಪ್ರಶಸ್ತಿ ನೀಡಲಾಗುವುದು. ಕ್ರೀಡಾಪಟುಗಳು ಮತ್ತು ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಪಂದ್ಯಾಟದ ಬಗ್ಗೆ ಹೆಚ್ಚಿನ ಮಾಹಿತಿಗೆ ಮೊ: ೯೪೮೩೯೧೫೯೧೩, ೯೬೩೨೨೯೭೨೨೭ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.