ಮಡಿಕೇರಿ, ಮಾ. ೨೧: ೨೦೨೪ ನೇ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬAಧ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕುರಿತು ನೋಡಲ್ ಅಧಿಕಾರಿ, ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶ, ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರ ಅವರಿಂದ ವಿವರಣೆ ಪಡೆದು ಪರಿಶೀಲಿಸಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಾಡು ಗ್ರಾಮ ಯಮುನಾ ಚಂಗಪ್ಪ ಎಂಬುವವರು ಸಾಮಾಜಿಕ ಜಾಲತಾಣ ಫೇಸ್ಬುಕ್ನ ತಮ್ಮ ಖಾತೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಸುದ್ದಿಯನ್ನು ಹರಿ ಬಿಟ್ಟಿರುವ ಬಗ್ಗೆ ದೂರು ಸ್ವೀಕರಿಸಿದ್ದು, ಈ ಕುರಿತು ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಕಲಂ: ೧೦೭ ಸಿಆರ್ಪಿಸಿ ಅಡಿಯಲ್ಲಿ ಯಮುನಾ ಚಂಗಪ್ಪ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮಡಿಕೇರಿಯ ಐ.ಜಿ. ಚಿಣ್ಣಪ್ಪ ಎಂಬುವವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ತಮ್ಮ ಖಾತೆ ಯಲ್ಲಿ ಪ್ರಧಾನ ಮಂತ್ರಿಯವರ ಭಾವಚಿತ್ರವನ್ನು ಅಸಂಬದ್ಧ ವಾಗಿ ಹಾಗೂ ಅವಹೇಳನಕ ರವಾಗಿ ಚಿತ್ರಿಸಿರುವುದನ್ನು ಪೋಸ್ಟ್ ಮಾಡಿರುವ ಬಗ್ಗೆ ದೂರು ಸ್ವೀಕರಿಸಿದ್ದು, ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂಜಾ ಗ್ರತಾ ಕ್ರಮವಾಗಿ ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಕಲಂ: ೧೯೭ ಸಿಆರ್ ಪಿಸಿ ಅಡಿಯಲ್ಲಿ ಐ.ಜಿ. ಚಿಣ್ಣಪ್ಪ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಯಮುನಾ ಚಂಗಪ್ಪ ಹಾಗೂ ಐ.ಜಿ ಚಿಣ್ಣಪ್ಪ ಅವರುಗಳಿಂದ ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡ ದಂತೆ ಬಾಂಡ್ ಬರೆಸಿಕೊಳ್ಳಲಾಗಿದೆ.

ತಾ.೩ ರಂದು Suಜhಚಿಞಚಿಡಿ ಡಿಚಿo @Imsuಜhಚಿಞಚಿಡಿಡಿಚಿo ಎಂಬ (ಖಿತಿiಣಣeಡಿ) ಖಾತೆಯಲ್ಲಿ ಸುಳ್ಳು ಸಂದೇಶವನ್ನು ಬರೆದು ಒಂದು ವೀಡಿಯೋವನ್ನು ಸಾಮಾಜಿಕ ಜಾಲತಾಣ (ಖಿತಿiಣಣeಡಿ) ಖಾತೆಯಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿ ಮೂಲತಃ ಕಾರ್ಕಳ, ಉಡುಪಿ ಜಿಲ್ಲೆ ಪ್ರಸ್ತುತ ಉತ್ತರಪ್ರದೇಶ ರಾಜ್ಯ ಮುಡಾಫರ್ನಗರ ಜಿಲ್ಲೆ ಖತೋಲಿಯ ನಿವಾಸಿ ಸುಧಾಕರ ರಾವ್, (೫೫) ಎಂಬುವವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ವಿಶೇಷ ಸೂಚನೆ: ೨೦೨೪ ನೇ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬAಧ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಜಾತಿ/ಪಕ್ಷ/ವ್ಯಕ್ತಿಗಳ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಡದಂತೆ ಜಾಲತಾಣದಲ್ಲಿ ಸಂದೇಶ/ಭಾವಚಿತ್ರ ಪೋಸ್ಟ÷್ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿ ಕರಲ್ಲಿ ಕೋರಿದೆ. ಸಾಮಾಜಿಕ ಜಾಲ ತಾಣಗಳ ಸಂಪೂರ್ಣ ನಿಗಾವಹಿಸಿದ್ದು, ಸುಳ್ಳು ಸುದ್ದಿಯ ಪೋಸ್ಟ÷್ಗಳನ್ನು ಹರಿಬಿಟ್ಟ ವ್ಯಕ್ತಿಗಳ ವಿರುದ್ಧ ಖP ಂಛಿಣ & IPಅ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.