ನವದೆಹಲಿ, ಮಾ. ೨೧: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬAಧಿಸಿದAತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿAದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ. ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.