ಮಡಿಕೇರಿ, ಮಾ. ೨೧: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವ ತಾ. ೨೮ ರಿಂದ ೩೧ ರವರೆಗೆ ನಡೆಯಲಿದೆ.
ಶಾಲಾ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮವು ತಾ. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನೆ ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟçಪತಿ ಪ್ರಶಸ್ತಿ ಪುರಸ್ಕೃತರಾದ ಮೇಜರ್ ಬಿದ್ದಂಡ ಎ. ನಂಜಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡವ ಸಮಾಜದ ಉಪಾಧ್ಯಕ್ಷರು ಮತ್ತು ಜಿಟಿಪಿಎಸ್ ಕಾರ್ಯಾಧ್ಯಕ್ಷ ನಂದಿನೆರವAಡ ಚೀಯಣ್ಣ ವಹಿಸಲಿದ್ದಾರೆ.
ತಾ. ೩೦ ರಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಮೈಸೂರಿನ ಎಸ್.ಬಿ.ಆರ್.ಆರ್. ಮಹಾಜನ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಕೆ. ಹರೀಶ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಜಿ.ಟಿ.ಪಿ.ಎಸ್. ಕರೆಸ್ಪಾಡೆಂಟ್ ಕನ್ನಂಡ ಕವಿತಾ ಬೊಳ್ಳಪ್ಪ ವಹಿಸಲಿದ್ದಾರೆ.
ತಾ. ೩೧ ರಂದು ೨.೩೦ ಗಂಟೆಗೆ ಕೊಡವ ಸಮಾಜ ಮತ್ತು ಜಿ.ಟಿ.ಪಿ.ಎಸ್. ಅಧ್ಯಕ್ಷ ಮಂಡುವAಡ ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಮೇರಿಯಂಡ ನಾಣಯ್ಯ, ಕಾಫಿ ಬೆಳೆಗಾರ ಹಾಗೂ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ ಪಾಲ್ಗೊಳ್ಳಲಿದ್ದಾರೆ.