ಗೋಣಿಕೊಪ್ಪಲು, ಮಾ. ೨೧: ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಪ್ರತಿ ಗಡಿ ಭಾಗದಲ್ಲಿ ಪೊಲೀಸರು ಸೇರಿದಂತೆ ಇತರ ಇಲಾಖಾ ಅಧಿಕಾರಿಗಳು ದಿನದ ೨೪ ಗಂಟೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ೩ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರತಿ ವಾಹನಗಳನ್ನು ತಪಾಸಣೆಗೆ ಒಳಪಡಿಸಿದ ನಂತರವೇ ಬಿಡಲಾಗುತ್ತಿದೆ.
ಕರ್ನಾಟಕ- ಕೇರಳ ಅಂತರರಾಜ್ಯ ಸಂಪರ್ಕ ಕಲ್ಪಿಸುವ ಕೊಡಗಿನ ಕುಟ್ಟ ಚೆಕ್ ಪೋಸ್ಟ್, ಹಾಗೂ ತಿತಿಮತಿ ಆನೆಚೌಕೂರು ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದ ನಗದು ಹಾಗೂ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚುನಾವಣಾ ನಿಯಮದಂತೆ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ತಿತಿಮತಿ ಬಳಿಯ ಆನೆಚೌಕೂರು ಚೆಕ್ಪೋಸ್ಟ್ಗೆ ವೀರಾಜಪೇಟೆಯ ಡಿವೈಎಸ್ಪಿ ಮೋಹನ್ ಕುಮಾರ್ ದಿಢೀರ್ ಭೇಟಿ ನೀಡುವ ಮೂಲಕ ಖುದ್ದಾಗಿ ತಾವೇ ವಾಹನಗಳನ್ನು ಪರಿಶೀಲನೆ ನಡೆಸಿದರು.
ಚೆನ್ನೆöÊನಿಂದ ಕರ್ತವ್ಯ ಮುಗಿಸಿ, ತನ್ನ ಕಾರಿನಲ್ಲಿ ಕೊಡಗಿನ ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಸೈನಿಕನೊಬ್ಬನ ಕಾರಿನಲ್ಲಿ ಮದ್ಯ ಇರುವುದು ತಪಾಸಣೆ ವೇಳೆ ಪೊಲೀಸರಿಗೆ ಕಂಡು ಬಂದಿದೆ. ಮದ್ಯ ಖರೀದಿ ಬಗ್ಗೆ ಅಗತ್ಯ ದಾಖಲೆಗಳಿದ್ದರೂ, ಚುನಾವಣಾ ನಿಯಮದಂತೆ ಹೆಚ್ಚಿನ ಮದ್ಯ ಸಾಗಿಸುವ ಅವಕಾಶ ಇಲ್ಲದಿರುವುದನ್ನು ಸೈನಿಕನಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಆತನ ಮೇಲೆ ಪ್ರಕರಣ ದಾಖಲಿಸಿದರು. ಮತ್ತೊಂದು ಪ್ರಕರಣದಲ್ಲಿ ೭.೫ ಲೀ. ದಾಖಲೆ ಇಲ್ಲದ ಮದ್ಯ ಸಾಗಿಸುತ್ತಿದ್ದ ವಾಹನ ತಪಾಸಣೆಗೊಳಪಡಿಸಿ ವಶಪಡಿಸಿಕೊಳ್ಳಲಾಯಿತು.
ಕೇರಳ -ಕರ್ನಾಟಕ ಗಡಿ ಭಾಗವಾದ ಕುಟ್ಟ ಚೆಕ್ಪೋಸ್ಟ್ನಲ್ಲಿ ಕೇರಳದಿಂದ ಕೊಡಗಿನ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಕಾರಿನಲ್ಲಿ ರೂ. ೫ ಲಕ್ಷ ಹಣ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿರುವುದು ೩ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ತಪಾಸಣೆ ವೇಳೆ ಕಂಡು ಬಂದ ಹಿನೆÀ್ನಲೆಯಲ್ಲಿ ಹಣವನ್ನು ಜಪ್ತಿ ಮಾಡಲಾಯಿತು. ನಿಯಮದಂತೆ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಗೆ ಪ್ರವೇಶ ಮಾಡುವ ಪ್ರತಿಯೊಂದು ವಾಹನಗಳನ್ನು ನಿಯಮಾನುಸಾರವಾಗಿ ಪೊಲೀಸರು ತಪಾಸಣೆ ನಡೆಸಿದ ನಂತರವೇ ಬಿಡಲಾಗುತ್ತಿದೆ. ಪೊಲೀಸ್ ಇಲಾಖೆ ಹಗಲು ರಾತ್ರಿ ನಿರಂತರವಾಗಿ ಗಡಿಭಾಗದಲ್ಲಿ ತಪಾಸಣೆಯಲ್ಲಿ ನಿರತರಾಗಿದ್ದಾರೆ. ಇದರಿಂದಾಗಿ ಗಡಿಯಲ್ಲಿ ಸಾಲು ಸಾಲು ವಾಹನಗಳು ನಿಲ್ಲುತ್ತಿವೆ. ಪ್ರತಿ ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿರುವುದರಿಂದ ವಾಹನ ಸವಾರರಿಗೆ ಒಂದಷ್ಟು ವಿಳಂಬವಾಗುತ್ತಿದೆ. ಗಡಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಲವು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.
ಚೆಕ್ ಪೋಸ್ಟ್ನಲ್ಲಿ ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಗಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಚುನಾವಣಾ ಅಧಿಕಾರಿಗಳು ದಿಢೀರನೆ ಭೇಟಿ ನೀಡಿ ಕರ್ತವ್ಯದಲ್ಲಿರುವ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೆಲಸ ಕಾರ್ಯವನ್ನು ವೀಕ್ಷಣೆ ಮಾಡುತ್ತಿದ್ದಾರೆ.
ತಿತಿಮತಿ ಬಳಿಯ ಆನೆಚೌಕೂರು ಗಡಿಯಲ್ಲಿ ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್, ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ರೂಪಾದೇವಿ ಬಿರಾದಾರ್, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಿಬ್ಬಂದಿಗಳು ತಪಾಸಣ ವೇಳೆ ಹಾಜರಿದ್ದರು. -ಹೆಚ್.ಕೆ.ಜಗದೀಶ್ ಕುಶಾಲನಗರ: ಕೊಡಗು - ಮೈಸೂರು ಜಿಲ್ಲೆಯ ಗಡಿಭಾಗ ಕುಶಾಲನಗರ ಚುನಾವಣಾ ವಾಹನ ತಪಾಸu Á ಕೇಂದ್ರದಲ್ಲಿ ಗುರುವಾರ ಸಮರ್ಪಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ. ೨ ಲಕ್ಷ ೯೨ ಸಾವಿರ ೬೫೭ ನಗದು ಹಣ ವಶಪಡಿಸಿಕೊಳ್ಳಲಾಗಿದೆ.
ಗಡಿ ಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಕೊಪ್ಪ ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಬೈಕ್ ಒಂದರಲ್ಲಿ (ಏಂ೪೫ ಇಃ೪೪೮೯) ಹಣ ಪತ್ತೆಯಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚುನಾವಣಾ ಅಧಿಕಾರಿ ಪೂವಯ್ಯ ನೇತೃತ್ವದ ತಂಡ ಹಣವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚುನಾವಣಾ ಕೇಂದ್ರದ ತಂಡದ ಸದಸ್ಯರಾದ ಮಹಾದೇವ್, ಅಭಿಷೇಕ್ ಹಾಗೂ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಸುಬ್ರಮಣಿ, ಸಿಬ್ಬಂದಿಗಳಾದ ಸಮಂತ, ಜಯಪ್ರಕಾಶ್, ಸತೀಶ್ ಅವರುಗಳು ಕಾರ್ಯಾಚರಣೆ ನಡೆಸಿದರು. -ಚಂದ್ರಮೋಹನ್