ಮಡಿಕೇರಿ, ಮಾ. ೨೨: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಚಾರ ಕಾರ್ಯಕ್ಕಿಳಿದು ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುವಂತೆ ಮಾಡಿದ್ದಾರೆ.

ಅಭ್ಯರ್ಥಿ ಯಾರೆಂಬ ಗೊಂದಲಕ್ಕೆ ಉತ್ತರ ದೊರಕುತ್ತಿದಂತೆ ಬಿಜೆಪಿ ಪಾಳಯದಲ್ಲಿ ಉತ್ಸಾಹ ಮೂಡಿತ್ತು. ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ಮೋರ್ಚಾದ ಸಮಾವೇಶದಲ್ಲಿ ಪಾಲ್ಗೊಂಡ ಯದುವೀರ ಅವರು ಇಂದು ಭಾಗಮಂಡಲ-ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ಬೆಳಿಗ್ಗೆ ೯ ಗಂಟೆಗೆ ಭಾಗ ಮಂಡಲದ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಲಕಾವೇರಿಗೆ ಆಗಮಿಸಿ ಮಹಾಗಣಪತಿ, ಅಗಸ್ತೆö್ಯÃಶ್ವ ರನಿಗೆ ಪೂಜೆ ಸಲ್ಲಿಸಿದ ನಂತರ ಕಾವೇರಿ ಕುಂಡಿಕೆ ಬಳಿ ವಿಶೇಷ ಪೂಜೆಯನ್ನು ನೆರವೇರಿಸಿ ಗೆಲುವು ಹಾಗೂ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು.

ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಎಂ. ಲಕ್ಷö್ಮಣ್ ಗೌಡ ಅಧಿಕೃತ ರಂಗ ಪ್ರವೇಶಿಸುವ ನಡುವೆ ಯದುವೀರ ಅವರು ಪ್ರಚಾರ ಕಾರ್ಯಕ್ಕಿಳಿದು ಮತದಾರರನ್ನು ಸೆಳೆಯುವ ಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಚುನಾವಣೆ ರಂಗು ಪಡೆದುಕೊಂಡಿದೆ.

ಇಂದು ಭಾಗಮಂಡಲ-ತಲಕಾವೇರಿಯಲ್ಲಿ ವಿಶೇಷ ಪೂಜೆ ಬಳಿಕ ಚೇರಂಬಾಣೆಯ ಕೊಡವ ಸಮಾಜದಲ್ಲಿ ಚೇರಂಬಾಣೆ, ಭಾಗಮಂಡಲ, ಕುಂದಚೇರಿ, ಬೆಟ್ಟಗೇರಿ, ಅಯ್ಯಂಗೇರಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿ ರಾಜಕೀಯದ ಪ್ರಮುಖ ಭಾಗವಾದ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಅನಂತರ ಸಂಪಾಜೆ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಸಂಪಾಜೆ, ಚೆಂಬು, ಪೆರಾಜೆ, ಮೂರ್ನಾಡು ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಮರಗೋಡು, ಹೊಸ್ಕೇರಿ, ಮೂರ್ನಾಡು, ಹಾಕತ್ತೂರು, ಹೊದ್ದೂರು, ಚೆಯ್ಯಂಡಾಣೆ, ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.

೩ಐದನೇ ಪುಟಕ್ಕೆ

(ಮೊದಲ ಪುಟದಿಂದ)

‘ಸಾಮರ್ಥ್ಯದ ಆಧಾರದ ಚುನಾವಣೆ’

‘ಲೋಕಸಭೆ ಚುನಾವಣೆಯನ್ನು ಸಾಮರ್ಥ್ಯದ ಆಧಾರದಲ್ಲಿ ಎದುರಿಸುತ್ತೇವೆ’ ಎಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ತಲಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿಗೂ ಮೈಸೂರಿಗೆ ಅವಿನಾಭಾವ ಸಂಬAಧವಿದೆ. ಧಾರ್ಮಿಕ ವಿಚಾರ ಮಾತ್ರವಲ್ಲದೆ ಕಾವೇರಿ ಆರ್ಥಿಕತೆಯ ಬೆನ್ನೆಲುಬಾಗಿದೆ. ಎದುರಾಳಿಯಾಗಿ ಎಂ. ಲಕ್ಷö್ಮಣ್ ಕಣದಲ್ಲಿದ್ದಾರೆ. ಅವರನ್ನು ಸ್ವಾಗತಿಸುತ್ತೇನೆ. ಸಾಮರ್ಥ್ಯದ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ. ಪಕ್ಷದವರ ಸಹಕಾರದೊಂದಿಗೆ ಮುನ್ನಡೆಯಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಳ್ಳಲಾಗುತ್ತಿದೆ. ಉತ್ತಮ ಬೆಂಬಲ ಕೂಡ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ತು ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲೀರ ಚಲನ್ ಕುಮಾರ್, ವಕ್ತಾರರಾದ ತಳೂರು ಕಿಶೋರ್ ಕುಮಾರ್, ಬಿ.ಕೆ. ಅರುಣ್ ಕುಮಾರ್, ಸುಬ್ರಮಣ್ಯ ಉಪಾಧ್ಯಾಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಭಾಗಮಂಡಲ ಗ್ರಾ.ಪಂ. ಉಪಾಧ್ಯಕ್ಷ ಹೊಸೂರು ಸತೀಶ್, ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಮುಖರಾದ ಕಾಂಗೀರ ಸತೀಶ್, ಕಾರೇರ ಕವನ್ ಕಾವೇರಪ್ಪ, ಪಿ.ಡಿ. ಪೊನ್ನಪ್ಪ, ಡೀನ್ ಬೋಪಣ್ಣ, ಬಿ.ಎಂ. ಹರೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ, ತಾ. ೨೩ ರಿಂದ (ಇಂದಿನಿAದ) ಹಾಲಿ ಸಂಸದ ಪ್ರತಾಪ್‌ಸಿಂಹ, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ತಾನು ಮೈಸೂರು ಮನೆತನದ ರಾಜ ಎಂಬ ಮಾತ್ರಕ್ಕೆ ಕಾರ್ಯಕರ್ತರಲ್ಲಿ ತನ್ನೊಂದಿಗೆ ಮಾತನಾಡಲು, ಚರ್ಚಿಸಲು ಅಂಜಿಕೆ ಪಡುವ ಅವಶ್ಯಕತೆ ಇಲ್ಲ. ನಾವುಗಳು ಸಾಮಾನ್ಯರೊಂದಿಗೆ ಸಾಮಾನ್ಯರು ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಚೇರಂಬಾಣೆಯ ಕೊಡವ ಸಮಾಜದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲರ ಸಲಹೆ ಸಹಕಾರದೊಂದಿಗೆ ಮುನ್ನಡೆಯುತ್ತೇನೆ. ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಮುಂದಿನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅನುಭವಿಗಳ ಸಲಹೆಯನ್ನು ಪಡೆದುಕೊಳ್ಳಲಾಗುವುದು ಎಂದರು.

ತನ್ನ ಗೆಲುವಿಗೆ ಕಾರ್ಯಕರ್ತರ ಶ್ರಮ ಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ತಾನು ರಾಜನೆಂಬ ಕಾರಣಕ್ಕೆ ನನ್ನಿಂದ ಅಂತರ ಕಾಯ್ದುಕೊಳ್ಳಬೇಕಿಲ್ಲ. ಕಾರ್ಯಕರ್ತರಿಗಾಗಿ ಮೈಸೂರಿನಲ್ಲಿ ಕಚೇರಿ ಇದೆ. ತಾನು ಸಾಮಾನ್ಯನಂತೆ ನಿಮಗೆ ಸಿಗುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾವು ಇದ್ದೇವೆ. ಅದರ ವಿರುದ್ಧ ನಡೆ ಎಂದಿಗೂ ಅನುಸರಿಸಿಲ್ಲ. ರಾಜ ಗೌರವ ವಿಸರ್ಜನೆಗೊಳಿಸಿ ಜನರೊಡನೆ ಇದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಸುವರ್ಣ ಯುಗಕ್ಕೆ ಮುನ್ನಡಿ ಇಟ್ಟಿದ್ದಾರೆ. ಕಳೆದ ೧೦ ವರ್ಷಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ವಿಕಸಿತ ಭಾರತ-೨೦೪೭ ದೂರದೃಷ್ಟಿ ಸಾಕಾರಕ್ಕೆ ಅವರೊಂದಿಗೆ ಕೈಜೋಡಿಸಬೇಕು. ಮುಂಬರುವ ಪೀಳಿಗೆಗೆ ಒಳ್ಳೆ ದೇಶವನ್ನು ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ದೇಶದ ಭದ್ರತೆ, ಆರ್ಥಿಕತೆ ರಕ್ಷಣೆ ನಿಟ್ಟಿನಲ್ಲಿ ಈ ಚುನಾವಣೆ ಎದುರಿಸಬೇಕಿದೆ. ಕಳೆದ ೧೦ ವರ್ಷಗಳಲ್ಲಿ ದೇಶ ಆಂತರಿಕ ಭದ್ರತೆಯನ್ನು ಗಟ್ಟಿಗೊಳಿಸಿ ಭಯೋತ್ಪಾದನೆ ಮೆಟ್ಟಿ ನಿಂತು ಶಾಂತಿಯುತ ಸಮಾಜ ಕಟ್ಟುವ ಜೊತೆಗೆ ಅಭಿವೃದ್ಧಿಗೊಳಿಸಿ ಪ್ರಪಂಚದಲ್ಲಿ ಭಾರತ ೫ ನೇ ಸ್ಥಾನದಲ್ಲಿದೆ ಎಂದು ವಿವರಿಸಿದರು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಭಾರತ ವಿಶ್ವಗುರು ಸ್ಥಾನದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಜನಮೆಚ್ಚಿದ್ದಾರೆ. ಹಿಂದಿನ ಸಂಸದ ಪ್ರತಾಪ್ ಸಿಂಹ ಜನಪರ ಕಾರ್ಯಕ್ರಮ ಜಾರಿಗೊಳಿಸಿ ಕ್ಷೇತ್ರಕ್ಕೆ ಅಭ್ಯುದÀಯಕ್ಕೆ ಶ್ರಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಕೇಂದ್ರ ಹಾಗೂ ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರಕಾರದ ಜನಪರ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುವಂತೆ ಕರೆ ನೀಡಿದರು.

ವಿಧಾನ ಪರಿಷತ್ತು ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲೀರ ಚಲನ್, ಮಹೇಶ್ ಜೈನಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನಿತಾ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಫ್ರು ರವೀಂದ್ರ, ಚೇರಂಬಾಣೆ ಹೋಬಳಿ ಅಧ್ಯಕ್ಷ ಸುಮನ್, ಚೆಟ್ಟಿಮಾನಿ ಅಧ್ಯಕ್ಷ ಶ್ರೀಧರ್, ಭಾಗಮಂಡಲ ಅಧ್ಯಕ್ಷ ರಾಜೀವ್, ಭಾಗಮಂಡಲ ಗ್ರಾ.ಪಂ. ಉಪಾಧ್ಯಕ್ಷ ಹೊಸೂರು ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.