ದ್ವೇಷ ಭಾಷಣ: ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು, ಮ. ೨೨: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾರ್ಚ್ ೧ ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದರು. ಈ ಸಂಬAಧ ಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಇನ್ನು ಕಳೆದ ಭಾನುವಾರ ನಗರತ್ ಪೇಟೆಯಲ್ಲಿ ಆಜಾನ್ ಸಂದರ್ಭದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸರು ಕೇಸ್ ದಾಖಲಿಸಿದ್ದರು. ಈ ಇಬ್ಬರು ಬಿಜೆಪಿ ನಾಯಕರು ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಬೇಡವೇ ಎಂದು ತೇಜಸ್ವಿ ಸೂರ್ಯ ಪರ ವಕೀಲ ಪ್ರಸನ್ನ ಕುಮಾರ್ ಅವರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಇದಕ್ಕೆ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿ, ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲ. ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ವಿರುದ್ಧ ಪ್ರತಿಭಟನೆ ಸಂಬAಧದ ಕೇಸ್‌ಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸುಪ್ರೀಂಕೋರ್ಟ್ ನೀಡುವ ತೀರ್ಪು ತೇಜಸ್ವಿ ಸೂರ್ಯ ಕೇಸ್‌ಗೂ ಅನ್ವಯವಾಗಬಹುದು ಎಂದು ಹೇಳಿ ಬಿಜೆಪಿ ಸಂಸದನ ವಿರುದ್ಧದ ಕೇಸ್‌ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದರು. ಇನ್ನು ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್ ದಳವಾಯಿ ಅವರು, ಚುನಾವಣೆಗೆ ಸಂಬAಧಿಸಿದAತೆ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಕೇಸ್ ದಾಖಲಿಸಿದ್ದಾರೆ ಎಂದು ಹೇಳಿದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು, ಶೋಭಾ ಕರಂದ್ಲಾಜೆ ವಿರುದ್ಧದ ಎಫ್‌ಐಆರ್‌ಗೂ ತಡೆ ನೀಡಿ ಆದೇಶಿಸಿದ್ದಾರೆ.

ಪ್ರಧಾನಿ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವ

ಥಿಂಪೊ, ಮಾ. ೨೨: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗೇಲ್ ವಾಂಗ್ ಚುಕ್ ಅವರು ಈ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಈ ಪ್ರಶಸ್ತಿ ಪಡೆದುಕೊಂಡ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ದಿ ಗ್ಯಾಲ್ಪೊ' ಪ್ರಶಸ್ತಿ ಸ್ವೀಕರಿಸಲು ನನಗೆ ಸಂತಸವಾಗಿದೆ. ಈ ಪ್ರಶಸ್ತಿಯನ್ನು ೧೪೦ ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ೨೦೨೧ರ ಡಿಸೆಂಬರ್ ೧೭ ರಂದು ಭೂತಾನ್‌ನ ೧೧೪ನೇ ರಾಷ್ಟಿçÃಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.

ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ಸೋನು ಗೌಡ ವಶಕ್ಕೆ

ಬೆಂಗಳೂರು, ಮಾ. ೨೨: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ ೧ ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ. ಬ್ಯಾಡರಹಳ್ಳಿ ಪೊಲೀಸರು ಇಂದು ಸೋನು ಗೌಡ ಅವರನ್ನು ಬೆಂಗಳೂರಿನ ಸಿಜೆಎಂ ಕೋರ್ಟ್ಗೆ ಹಾಜರುಪಡಿಸಿದರು. ಮಗು ಪೋಷಕರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ಮೆಂಟ್‌ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶದಿಂದ ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿ ನೀಡುವಂತೆ ಪೊಲೀಸರು ಮನವಿ ಮಾಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್, ಆರೋಪಿ ಸೋನು ಗೌಡ ಅವರನ್ನು ಮಾರ್ಚ್ ೨೫ರ ವರೆಗೆ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಈ ವರ್ಷದ ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ೮ ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬAಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ. ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.