ಮಡಿಕೇರಿ, ಮಾ. ೨೨: ಪಕ್ಷದೊಳಗೆ ಸಹಜವಾಗಿರುವ ಗೊಂದಲ, ಭಿನ್ನಾಭಿಪ್ರಾಯ, ಮನಸ್ತಾಪಗಳನ್ನು ಕಾರ್ಯಕರ್ತರು ಬದಿಗೊತ್ತಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಪಕ್ಷದ ನಾಯಕರು ಕರೆ ನೀಡಿದರು. ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬರು ಒಂದಾಗಿ ಲೋಕಸಭೆ ಚುನಾವಣೆ ಎದುರಿಸಿ ಗೆಲುವಿಗೆ ದುಡಿಯಬೇಕು. ವಿಧಾನಸಭಾ ಚುನಾವಣಾ ಮಾದರಿಯಲ್ಲಿ ಸಂಘಟಿತ ಕೆಲಸ ಮಾಡಿದರೆ ಗೆಲುವು ನಿಶ್ಚಿತ. ಅಭ್ಯರ್ಥಿ ಲಕ್ಷö್ಮಣ್ ಅವರು ಕೊಡಗು ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ದುಡಿದಿದ್ದಾರೆ. ಕಳೆದ ೧೦ ವರ್ಷಗಳಲ್ಲಿ ಅಗತ್ಯ ನೆರವು ಕೇಂದ್ರದಿAದ ದೊರೆತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದರೆ ಮತ್ತಷ್ಟು ಅನುದಾನ ಕೇಂದ್ರದಿAದ ಜಿಲ್ಲೆಗೆ ಲಭಿಸುತ್ತದೆ. ಸ್ಥಾನ ಸಿಗದೆ ಕೆಲವರು ಅಸಮಾಧಾನಗೊಂಡಿದ್ದಾರೆ. ಇದನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿ ಕೊಂಡು ಮುನ್ನಡೆಯೋಣ ಎಂದು ಕರೆ ನೀಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಹಿನ್ನಡೆ ಅನುಭವಿ ಸುತ್ತಿದ್ದ ಕಾಂಗ್ರೆಸ್ ಪಕ್ಷವನ್ನು ವ್ಯವಸ್ಥಿತ ವಾಗಿ ಸಂಘಟಿಸಿದ ಫಲದಿಂದ ಇದೀಗ ಪಕ್ಷ ಬಲಶಾಲಿsಯಾಗಿ ಜಿಲ್ಲೆಯ ೨ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ಎಲ್ಲಾ ಪಕ್ಷಗಳಲ್ಲಿಯೂ ಭಿನ್ನಾಭಿಪ್ರಾಯ ಐದನೇ ಪುಟಕ್ಕೆ

(ಮೊದಲ ಪುಟದಿಂದ) ಗೊಂದಲಗಳು ಸಹಜ. ಆದರೆ, ಅದನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಂಡು ಮುನ್ನಡೆಯಬೇಕು. ೨೫ ವರ್ಷಗಳಿಂದ ಜಿಲ್ಲೆಯಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಅಧಿಕಾರ ಮರುಸ್ಥಾಪಿಸಲು ಕಾರ್ಯಕರ್ತರ ಶ್ರಮ ದೊಡ್ಡ ಮಟ್ಟದಲ್ಲಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು. ರಾಜವಂಶಸ್ಥರಿಗೆ ದೊಡ್ಡ ಮಟ್ಟದ ಗೌರವವಿದೆ. ಆದರೆ, ಅವರು ರಾಜಕೀಯಕ್ಕೆ ಬಂದಿರುವುದು ಸರಿಯಲ್ಲ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿಧಾನಸಭಾ ಚುನಾವಣೆ ಸಂದರ್ಭ ರಚಿಸಲಾದ ಬೂತ್ ಸಮಿತಿಯನ್ನು ಮುಂದುವರೆಸಿ ಪಕ್ಷವನ್ನು ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು. ನಗರಸಭೆ ನಾಮನಿರ್ದೇಶನ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಅದನ್ನು ಬಗೆಹರಿಸುವ ಕೆಲಸ ಮಾಡಲಾಗುವುದು. ರಾಜ್ಯ ಸರಕಾರದ ಸಾಧನೆ, ಕೊಡಗು ಜಿಲ್ಲೆಗೆ ನೀಡಿದ ಕೊಡುಗೆಯನ್ನು ಮತದಾರರಿಗೆ ಪ್ರಚಾರ ಮಾಡುವ ಕೆಲಸಕ್ಕೆ ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದ ಅವರು, ವೈಯಕ್ತಿಕ ಕಾರಣದಿಂದ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಆದರೆ, ಚುನಾವಣೆ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಹೇಳಿದರು. ವಿಧಾನ ಪರಿಷತ್ತು ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕೆ.ಪಿ.ಸಿ.ಸಿ. ಸದಸ್ಯ ಟಿ.ಪಿ.ರಮೇಶ್ ಮಾತನಾಡಿದರು.