ಕೂಡಿಗೆ, ಮಾ. ೨೧: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸದೇವ ಮೇಟಿ ಬಣದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ಜೆ. ಶರತ್ ಕುಮಾರ್ ನೇತೃತ್ವದಲ್ಲಿ ಕುಶಾಲನಗರ ತಾಲೂಕಿಗೆ ಒಳಪಡುವ ಗ್ರಾಮಗಳಲ್ಲಿ ಕೃಷಿ ಭೂಮಿಯ ಕೊಳವೆ ಬಾವಿಗಳನ್ನು ಅಕ್ರಮ ಕೊಳವೆ ಬಾವಿಗಳೆಂದು ವಿದ್ಯುತ್ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವುದನ್ನು ನಿಲ್ಲಿಸಬೇಕೆಂದು ಸಂಬAಧಿಸಿದ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಇಂಜಿನಿಯರ್ ಮಂಜುನಾಥ್ ಅವರಿಗೆ ಕಾಲಾವಕಾಶ ಕೇಳಿ ಮನವಿ ಸಲ್ಲಿಸಿದ ಮೇರೆಗೆ ೬ ತಿಂಗಳುಗಳಲ್ಲಿ ಸಕ್ರಮಗೊಳಿಸಿಕೊಳ್ಳುವಂತೆ ಸಂಬAಧಿಸಿದವರಿಗೆ ಸೂಚನೆ ನೀಡಿದರು. ಕುಶಾಲನಗರ ತಾಲೂಕು ತಹಶೀಲ್ದಾರ್ಗೂ ಮನವಿ ಸಲ್ಲಿಸಲಾಯಿತು.
ಮೈಸೂರು ಮತ್ತು ಕೊಡಗು ಜಿಲ್ಲಾ ಸಂಚಾಲಕ ಡಾ. ಅರುಣ್ ಕುಮಾರ್, ಗೌರವ ಅಧ್ಯಕ್ಷ ಚಂದ್ರಣ್ಣ, ಉಪಾಧ್ಯಕ್ಷ ಪ್ರಸನ್ನ ರೆಡ್ಡಿ, ತೊರೆನೂರು ಅಧ್ಯಕ್ಷ ಅರುಣ, ಮಾಜಿ ಸೈನಿಕ ಪುಟ್ಟೇಗೌಡ, ಚಂದ್ರಪ್ಪ, ಬನ್ನೂರು ಶಶಿ, ಗಣೇಶ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.