ಬೆಂಗಳೂರು, ಮಾ. ೨೨: ರಾಜ್ಯದ ೫,೮,೯, ೧೧ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬAಧಿಸಿದAತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ೫,೮,೯,೧೧ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ವರ್ಷದ ಪರೀಕ್ಷೆಯ ವೇಳೆಯೊಳಗೆ ಸಂಬAಧಪಟ್ಟವರೊAದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಸರ್ಕಾರದ ಮೇಲ್ಮನವಿ ಸಂಬAಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣ ಗೊಳಿಸಲು ಸುಪ್ರೀಂ ಕೋರ್ಟ್ ಬೆಂಗಳೂರು, ಮಾ. ೨೨: ರಾಜ್ಯದ ೫,೮,೯, ೧೧ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬAಧಿಸಿದAತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ೫,೮,೯,೧೧ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ವರ್ಷದ ಪರೀಕ್ಷೆಯ ವೇಳೆಯೊಳಗೆ ಸಂಬAಧಪಟ್ಟವರೊAದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಸರ್ಕಾರದ ಮೇಲ್ಮನವಿ ಸಂಬAಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣ ಗೊಳಿಸಲು ಸುಪ್ರೀಂ ಕೋರ್ಟ್ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸುವ ಅಧಿಕಾರವಿಲ್ಲ ಮತ್ತು ರಾಜ್ಯವು ಪ್ರಾಥಮಿಕ ಶಿಕ್ಷಣದ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆಯ ನಿಬಂಧನೆಗಳ ಪ್ರಕಾರ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸುವ ಮೊದಲು ರಾಜ್ಯ ಸರ್ಕಾರವು ಪೋಷಕರು, ಶಿಕ್ಷಕರು ಮತ್ತು ಶಾಲೆಗಳನ್ನು ಸಂಪರ್ಕಿಸಬೇಕು ಎಂದು ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ ವಾದಿಸಿದೆ. ಶಿಕ್ಷಣ ಹಕ್ಕು ಕಾಯಿದೆಯು ೬ ರಿಂದ ೧೪ ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಅನುಮತಿಸುವುದಿಲ್ಲ ಎಂದಿದೆ. ಆದಾಗ್ಯೂ, ರಾಜ್ಯ ಸರ್ಕಾರವು ೫,೮,೯ ಮತ್ತು ೧೧ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. ಏಕ ಸದಸ್ಯ ಪೀಠ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಮೊದಲು, ೧೧ ನೇ ತರಗತಿಯ ಪರೀಕ್ಷೆಗಳನ್ನು ಮುಕ್ತಾಯ ಗೊಳಿಸಲಾಯಿತು. ಹೀಗಾಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಳಿಸುವಂತೆ ವಿಭಾಗೀಯ ಪೀಠ ಸೂಚಿಸಿದೆ.