ಕೂಡಿಗೆ, ಮಾ. ೨೨: ಕೂಡಿಗೆ ಕ್ರೀಡಾ ಶಾಲಾ ಹಾಕಿ ಮೈದಾನದಲ್ಲಿ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪುರುಷರ ಮತ್ತು ಮಹಿಳೆಯರ ಅಂತರ ಕಾಲೇಜು ಹಾಕಿ ಪಂದ್ಯಾವಳಿಯ ಉದ್ಘಾಟನೆಯನ್ನು ಅಂರ್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ನೆರವೇರಿಸಿ ಮಾತನಾಡಿದರು.
ಕ್ರೀಡೆಯ ಮೂಲಕ ಉತ್ತಮ ಸಾಧನೆ ಮಾಡಿದವರಿಗೆ ಸರಕಾರಿ ಉದ್ಯೋಗದ ಜೊತೆಗೆ, ವಿವಿಧ ಕ್ಷೇತ್ರಗಳಲ್ಲಿ ಸ್ಥಾನ ಪಡೆಯಲು ಅವಕಾಶಗಳಿವೆ. ಅವುಗಳನ್ನು ಕ್ರೀಡಾಪಟುಗಳು ಬಳಕೆ ಮಾಡಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ. ಸೀನಪ್ಪ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಕೊಡಗು ವಿಶ್ವವಿದ್ಯಾಲಯವು ಪ್ರತ್ಯೇಕವಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉನ್ನತ ವ್ಯಾಸಂಗವನ್ನು ಪಡೆಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಈ ಸಂದರ್ಭ ತಿಳಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಕೂಡಿಗೆ ಕ್ರೀಡಾ ಶಾಲೆಯ ಮುಖ್ಯೋಪಾಧ್ಯಾಯ ಬಿ.ಟಿ. ದೇವಕುಮಾರ್, ಕುಶಾಲನಗರ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪಿ.ಪಿ. ಜಯಂತಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎಂ. ಪ್ರವೀಣ್ ಕುಮಾರ್ ವಹಿಸಿದ್ದರು. ಅಂತರ ಕಾಲೇಜು ಹಾಕಿ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ೯ ಪುರುಷರ ತಂಡ ಮತ್ತು ೩ ಮಹಿಳೆಯರ ತಂಡಗಳು ಭಾಗವಹಿಸಿದ್ದವು.
ಕಾರ್ಯಕ್ರಮದ ನಿರೂಪಣೆಯನ್ನು ಸುನಿಲ್ ನೆರವೇರಿಸಿ, ಪಿ.ಪಿ. ಜಯಂತಿ ಸ್ವಾಗತಿಸಿ, ಸುನಿಲ್ ಕುಮಾರ್ ವಂದಿಸಿದರು.