ಮಡಿಕೇರಿ, ಮಾ. ೨೨: ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳAಡ ಹಾಕಿ ನಮ್ಮೆ ತಾ.೩೦ ರಿಂದ ಏ.೨೮ ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ದಾಖಲೆಯ ೩೬೦ ತಂಡಗಳು ಹೆಸರು ನೋಂದಾಯಿಸಿಕೊAಡಿದ್ದು, ಕೂರ್ಗ್ ೧೧ ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯವನ್ನು ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ, ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ, ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ ಹಾಗೂ ಪ್ರಮುಖರು ಕೊಡವ ಹಾಕಿ ಅಕಾಡೆಮಿಯು ೨೬ ವರ್ಷಗಳ ಹಿಂದೆ ಕೊಡವ ಹಾಕಿ ನಮ್ಮೆಯ ಜನಕ ಪಾಂಡAಡ ದಿ. ಕುಟ್ಟಣಿ ಅವರ ನೇತೃತ್ವದಲ್ಲಿ ೧೯೯೭ ರಲ್ಲಿ ಸ್ಥಾಪಿತಗೊಂಡಿತು. ಅಂದಿನಿAದ ಇಂದಿನವರೆಗೆ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬವನ್ನು ಆಯೋಜಿಸುತ್ತಾ ಬರುತ್ತಿದೆ ಎಂದರು.
ಈ ವರ್ಷ ೨೪ನೇ ಹಾಕಿ ಹಬ್ಬವನ್ನು ಕುಂಡ್ಯೋಳAಡ ಕುಟುಂಬದ ಸಾರಥ್ಯದಲ್ಲಿ ನಡೆಸಲಾಗುತ್ತಿದೆ. ಕೊಡವ ಹಾಕಿ ಅಕಾಡೆಮಿ, ಹಾಕಿ ಕೂರ್ಗ್, ಹಾಕಿ ಕರ್ನಾಟಕ ಅಂಪರ್ಸ್ ಅಸೋಸಿ ಯೇಷನ್ ಹಾಗೂ ಸ್ಥಳೀಯ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುತ್ತಿದ್ದು, ಕುಂಡ್ಯೋಳAಡ ಹಾಕಿ ಕಾರ್ನಿವಲ್ ೨೦೨೪ ರ ಅಂತಿಮ ಪಂದ್ಯಾಟವನ್ನು ಸುಮಾರು ೫೦ ಸಾವಿರ ಕ್ರೀಡಾಭಿಮಾನಿಗಳು ವೀಕ್ಷಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಭಾರತೀಯ ಹಾಕಿಯ ತೊಟ್ಟಿಲು ಎಂದೇ ಪರಿಗಣಿಸಲ್ಪಟ್ಟಿರುವ ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. ೫೦ ಕ್ಕೂ ಹೆಚ್ಚು ಕೊಡವ ಅಂತರರಾಷ್ಟಿçÃಯ ಹಾಕಿ ಆಟಗಾರರು ಹಾಕಿ ಕ್ರೀಡೆಯ ಪರಂಪರೆಗೆ ಕೊಡುಗೆ ನೀಡಿದ್ದಾರೆ. ಪಾಂಡAಡ ಕುಟ್ಟಣಿ ಹಾಗೂ ಅವರ ಸಹೋದರ ಕಾಶಿಯವರಿಂದ ಕೊಡವ ಹಾಕಿ ಉತ್ಸವ ಆರಂಭವಾಯಿತು. ೧೯೯೭ ರಲ್ಲಿ ಕರಡದಲ್ಲಿ ಪಾಂಡAಡ ಕುಟುಂಬ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮೊದಲ ಬಾರಿಗೆ ಆಯೋಜಿಸಿದ್ದ ಹಾಕಿಹಬ್ಬದಲ್ಲಿ ೬೦ ತಂಡಗಳು ಪಾಲ್ಗೊಂಡಿದ್ದವು.
ಈ ಬಾರಿಯ ಕುಂಡ್ಯೋಳAಡ ಹಾಕಿ ಹಬ್ಬದಲ್ಲಿ ೩೬೦ ತಂಡಗಳ ನೋಂದಣಿಯೊAದಿಗೆ ಹೊಸ ದಾಖಲೆ ಸೃಷ್ಟಿಸುವ ಮೂಲಕ ಪ್ರತಿಷ್ಠಿತ ಕಪ್ಗಾಗಿ ಸೆಣಸಾಡುತ್ತಿರುವುದು ವಿಶೇಷ. ಕುಂಡ್ಯೋಳAಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಹಾಕಿ ಹಬ್ಬವನ್ನು ಆಯೋಜಿಸುವ ಮೂಲಕ ಸಮುದಾಯದ ಬಾಂಧವ್ಯವನ್ನು ಬೆಳೆಸುವ ಮತ್ತು ಕೊಡವ ಪರಂಪರೆಯನ್ನು ಸಂರಕ್ಷಿಸುವ ಕಾರ್ಯವನ್ನು ಮಾಡುತ್ತಿದೆ. ಈ ಹಾಕಿ ಪಂದ್ಯಾವಳಿಯಲ್ಲಿ ಎಲ್ಲಾ ಕ್ರೀಡಾಭಿಮಾನಿಗಳು ಹಾಗೂ ಕ್ರೀಡಾಪಟುಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಹಾಕಿ ಹಬ್ಬದೊಂದಿಗೆ ಮ್ಯಾರಥಾನ್ ಓಟ, ವಧುವರರ ಸಮಾವೇಶ, ಆಹಾರ ಉತ್ಸವ, ಆರೋಗ್ಯ ಶಿಬಿರ, ವೃತ್ತಿ ಮಾರ್ಗದರ್ಶನ, ಹಾಕಿ ರಾಷ್ಟಿçÃಯ, ಅಂತರರಾಷ್ಟಿçÃಯ ಆಟಗಾರರ ಪುನರ್ ಮಿಲನ ಮತ್ತು ಬಾಳೋಪಾಟ್ ತರಬೇತಿ ಮತ್ತಿತರ ಕಾರ್ಯಕ್ರಮಗಳು ಕೂಡ ನಡೆಯಲಿವೆ ಎಂದರು.
ಉದ್ಘಾಟನಾ ಪಂದ್ಯ
ತಾ. ೩೦ ರಂದು ನಡೆಯುವ ಉದ್ಘಾಟನಾ ಪಂದ್ಯ ಕೂರ್ಗ್ ೧೧ ಮತ್ತು ಇಂಡಿಯನ್ ನೇವಿ ನಡುವೆ ನಡೆಯಲಿದೆ. ಕೂರ್ಗ್ ೧೧ ತಂಡದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆಡುವ ಸಾಧ್ಯತೆಗಳಿದೆ. ಇದಕ್ಕೂ ಮೊದಲು ಸಾಯಿ ಮಡಿಕೇರಿ ಮತ್ತು ಸಾಯಿ ಪೊನ್ನಂಪೇಟೆ ಬಾಲಕಿಯರ ತಂಡಗಳ ನಡುವೆ ಪಂದ್ಯಾಟವನ್ನು ಆಯೋಜಿಸಲಾಗಿದೆ.
ಕೊಡವ ಹಾಕಿ ಅಕಾಡೆಮಿ ಕಳೆದ ವರ್ಷದಿಂದ ಒಂದು ಕೆಜಿ ಬೆಳ್ಳಿಯ ರೋಲಿಂಗ್ ಟ್ರೋಫಿ ನೀಡಿದೆ. ಈ ಬಾರಿಯ ಕುಂಡ್ಯೋಳAಡ ಹಾಕಿ ಹಬ್ಬದಲ್ಲಿ “ಮ್ಯಾನ್ ಆಫ್ ದಿ ಫೆಸ್ಟಿವಲ್” ಆಟಗಾರನಿಗೆ “ಏತರ್” ಸ್ಕೂಟರ್ ಸಂಸ್ಥೆ ಎಲೆಕ್ಟಿçಕ್ ಸ್ಕೂಟರ್ ನ್ನು ಬಹುಮಾನವಾಗಿ ನೀಡಲಿದೆ. ಬೆಂಗಳೂರಿನ ಪ್ರತಿಷ್ಠಿತ ಆರ್.ವಿ ವಿಶ್ವ ವಿದ್ಯಾನಿಲಯ ಹಾಕಿ ಪಂದ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಕಿ ತಂಡವನ್ನು ರಚನೆ ಮಾಡಲು ಮುಂದಾಗಿದೆ. ಕೊಡವ ಹಾಕಿ ಅಕಾಡೆಮಿ ಶಿಫಾರಸ್ಸು ಮಾಡುವ ಹಾಕಿಪಟುವಿಗೆ ಕಾಲೇಜ್ನಲ್ಲಿ ಓದಲು ಅವಕಾಶ ಮತ್ತು ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ ಎಂದು ಅವರುಗಳು ತಿಳಿಸಿದರು.
ರೂ. ೪ ಲಕ್ಷ ಬಹುಮಾನ
ಕುಂಡ್ಯೋಳAಡ ಹಾಕಿ ಹಬ್ಬದ ವಿಜೇತ ತಂಡಕ್ಕೆ ರೂ.೪ ಲಕ್ಷ, ದ್ವಿತೀಯ ೩ ಲಕ್ಷ, ತೃತೀಯ ೨ ಲಕ್ಷ ಮತ್ತು ನಾಲ್ಕನೇ ಸ್ಥಾನದ ತಂಡಕ್ಕೆ ರೂ. ೧ ಲಕ್ಷ ನಗದು ಮಾತ್ರವಲ್ಲದೆ ಬಹುಮಾನಗಳನ್ನು ನೀಡಲಾಗುವುದು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಹಾಕಿ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಪ್ರಮುಖರಾದ ಕಂಬೀರAಡ ಕಾವೇರಿ ಪೊನ್ನಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ದಿನೇಶ್ ಕಾರ್ಯಪ್ಪ ಹೇಳಿದರು.
ರೂ.೨ ಕೋಟಿ ವೆಚ್ಚ
ಖಜಾಂಚಿ ಕುಂಡ್ಯೋಳAಡ ವಿಶು ಪೂವಯ್ಯ ಮಾತನಾಡಿ, ಕುಂಡ್ಯೋಳAಡ ಹಾಕಿ ಹಬ್ಬಕ್ಕೆ ರೂ. ೨ ಕೋಟಿ ಖರ್ಚಾಗುತ್ತಿದ್ದು, ಕುಂಡ್ಯೋಳAಡ ಕುಟುಂಬಸ್ಥರಿAದ ರೂ.೩೦ ಲಕ್ಷ ಸಂಗ್ರಹಿಸಲಾಗಿದೆ. ಕಳೆದ ವರ್ಷದ ಹಾಕಿ ಹಬ್ಬಕ್ಕೆ ಸರಕಾರ ರೂ. ೧ ಕೋಟಿ ನೀಡಿತ್ತು, ಈ ಬಾರಿ ಸರಕಾರದ ಅನುದಾನ ಶೀಘ್ರ ದೊರೆತರೆ ಉತ್ತಮ ಎಂದರು.
ಅಧ್ಯಕ್ಷ ರಮೇಶ್ ಮುದ್ದಯ್ಯ ಮಾತನಾಡಿ ಕುಂಡ್ಯೋಳAಡ ಕುಟುಂಬ ಹಾಕಿ ಹಬ್ಬದ ಯಶಸ್ಸಿಗಾಗಿ ಅದ್ದೂರಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ತಯಾರಿ ನಡೆದಿತ್ತು ಎಂದು ತಿಳಿಸಿದರು.
ಮುಂದಿನ ವರ್ಷ ಮುದ್ದಂಡ ಹಾಕಿ ಹಬ್ಬ
ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಮಾತನಾಡಿ ಹಾಕಿ ಅಕಾಡೆಮಿಯು ೨೦೨೫ ರಲ್ಲಿ ೨೫ನೇ ಆವೃತ್ತಿಯ ಕೊಡವ ಕುಟುಂಬಗಳ ನಡುವಿನ ಹಾಕಿಹಬ್ಬ ನಡೆಸಲು ಮುದ್ದಂಡ ಕುಟುಂಬಸ್ಥರಿಗೆ ಅವಕಾಶ ನೀಡಿದೆ. ಈ ಹಾಕಿಹಬ್ಬ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ಉಪಸ್ಥಿತರಿದ್ದರು.