ಮಡಿಕೇರಿ, ಮಾ. ೨೨: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಇತ್ತೀಚೆಗೆ ಸಿ.ಎಸ್.ಆರ್. ನಿಧಿ ಅಡಿಯಲ್ಲಿ ೫೦ ಸೀಟಿನ ಒಂದು ಬಸ್ಅನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಸಿ.ಎಸ್.ಆರ್. ನಿಧಿ ಯೋಜನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ವತಿಯಿಂದ ಬಸ್ಅನ್ನು ವಿದ್ಯಾರ್ಥಿಗಳ ಪ್ರಯೋಜನಕ್ಕಾಗಿ ನೀಡುತ್ತಿರುವ ಬಗ್ಗೆ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್, ಜೀವ ರಸಾಯನ ಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥ ಡಾ. ಕಾರ್ಯಪ್ಪ ಕೆ.ಬಿ., ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಲಯ ವ್ಯವಸ್ಥಾಪಕ ಜೋಬಿ ಜೋಶ್, ಶ್ರೀಜಿತ್ ವಿ.ಕೆ., ರೀಜಿನಲ್ ೧ ಮ್ಯಾನೆಜರ್ ಜಗದೀಶ್ ಕಾಮತ್, ಮುಖ್ಯ ಶಾಖಾ ವ್ಯವಸ್ಥಾಪಕ ಕುಮಾರ್ ಅನುರೂಪ್ ಬಿಶು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ರೋಹಿಣಿ ಕೆ.ಎಂ., ಪ್ರಾಂಶುಪಾಲ ನರಸಿಂಹ ರೈ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ, ಸಹಾಯಕ ಆಡಳಿತಾಧಿಕಾರಿ ಮೋಹನ್ ಟಿ.ಎಂ., ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು.