ವೀರಾಜಪೇಟೆ, ಮಾ. ೨೪: ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ತಾ. ೨೫ ರಿಂದ (ಇಂದಿನಿAದ) ಏಪ್ರಿಲ್ ೬ರವರೆಗೆ ನಡೆಯಲಿದೆ. ಜಿಲ್ಲೆಯ ೨೭ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನ ೮, ಸೋಮವಾರಪೇಟೆ ತಾಲೂಕಿನ ೧೧, ವೀರಾಜಪೇಟೆ ತಾಲೂಕಿನ ೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯ ೧೭೧ ಪ್ರೌಢಶಾಲೆಯ ೬,೫೧೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ ೩,೩೪೦ ಬಾಲಕರು ಮತ್ತು ೩,೧೭೭ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲೂಕಿನ ೪೩, ಸೋಮವಾರಪೇಟೆ ತಾಲೂಕಿನ ೭೧ ಮತ್ತು ವೀರಾಜಪೇಟೆ ತಾಲೂಕಿನ ೫೭ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆ ಕೇಂದ್ರಗಳಲ್ಲಿ ಸೂಕ್ತವಾದ ಪೀಠೋಪಕರಣ, ಆಸನದ ವ್ಯವಸ್ಥೆ, ಕುಡಿಯಲು ಶುದ್ಧವಾದ ನೀರು, ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪರೀಕ್ಷಾ ದಿನಗಳಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಬೇಕು/ಹೋಗಬೇಕು. ಪ್ರವೇಶ ಪತ್ರ ತೋರಿಸಿದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಲಾಗಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಜೊತೆಗೆ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯಿತಿಯ ಸ್ವೀಕೃತಿ ಕೇಂದ್ರದಲ್ಲಿ ಪರೀಕ್ಷೆಯ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಆಗುಹೋಗುಗಳ ಬಗ್ಗೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್, ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಡಯಟ್ ಹಿರಿಯ ಉಪನ್ಯಾಸಕರ ತಂಡವನ್ನು ರಚಿಸಿ ಜಾಗೃತಿದಳ ರಚಿಸಲಾಗಿದೆ

ಪರೀಕ್ಷಾ ಕೇಂದ್ರಗಳ ವಿವರ

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಮೂರ್ನಾಡು ಪ್ರೌಢಶಾಲೆ, ಸಿದ್ದಾಪುರ ಪ್ರೌಢಶಾಲೆ, ಸಂಪಾಜೆ ಪ್ರೌಢಶಾಲೆ,

ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಒಎಲ್‌ವಿ ಆಂಗ್ಲ ಮಾಧ್ಯಮ ಶಾಲೆ, ಕುಶಾಲನಗರದ ಫಾತಿಮಾ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೇರೀಸ್ ಪ್ರೌಢಶಾಲೆ, ಕೊಡ್ಲಿಪೇಟೆಯ ಪದವಿ ಪೂರ್ವ ಕಾಲೇಜು, ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆ, ಹೆಬ್ಬಾಲೆಯ ಪದವಿ ಪೂರ್ವ ಕಾಲೇಜು.

ವೀರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಅನ್ನಮ್ಮ ಪ್ರೌಢಶಾಲೆ, ಅಮ್ಮತ್ತಿಯ ಗುಡ್ ಸೆಫರ್ಡ್ ಶಾಲೆ(ಹೊಸ ಕೇಂದ್ರ), ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆ, ಗೋಣಿಕೊಪ್ಪದ ಸಂತ ಥಾಮಸ್ ಶಾಲೆ, ತಿತಿಮತಿಯ ಸರ್ಕಾರಿ ಪ್ರೌಢಶಾಲೆ, ಪೊನ್ನಂಪೇಟೆಯ ಪಬ್ಲಿಕ್ ಶಾಲೆ, ಶ್ರೀಮಂಗಲದ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.