ಮಡಿಕೇರಿ ಮಾ.೨೪ : ಅಂತರರಾಷ್ಟಿçÃಯ ಜನಾಂಗೀಯ ತಾರತಮ್ಯ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿ ಹಿರಿಯರನ್ನು ಸ್ಮರಿಸಲಾಯಿತು.
ಹಿರಿಯರಿಗಾಗಿ ಶ್ರದ್ಧಾಂಜಲಿ ಅರ್ಪಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಆಡಳಿತ ನಡೆಸುತ್ತಿರುವ ಬಹು ಸಂಖ್ಯಾತರು ಅಲ್ಪಸಂಖ್ಯಾತ, ಅತ್ಯಂತ ಸೂಕ್ಷö್ಮ, ಆದಿಮ ಸಂಜಾತ ಕೊಡವ ಬುಡಕಟ್ಟು ಜನರನ್ನು ತಾರತಮ್ಯ ಮನೋಭಾವದಿಂದ ನೋಡುತ್ತಿರುವುದು ವಿಷಾದನೀಯವೆಂದು ಬೇಸರ ವ್ಯಕ್ತಪಡಿಸಿದರು.
ಯುಎನ್ಒ ಮತ್ತು ಭಾರತೀಯ ಸಂಸತ್ತು ಕೊಡವ ನರಮೇಧವನ್ನು ಖಂಡಿಸಬೇಕು ಮತ್ತು ಫ್ರೆಂಚ್ ಸರ್ಕಾರ ಘೋರ ಅಪರಾಧಕ್ಕಾಗಿ ಕ್ಷಮೆಯಾಚಿಸಬೇಕು. ದೇವಟ್ ಪರಂಬು ದುರಂತ ಮತ್ತು ಅರಮನೆಯ ಪಿತೂರಿಯಲ್ಲಿನ ರಾಜಕೀಯ ಹತ್ಯೆಗಳನ್ನು ಯುಎನ್ಒ ದ ಅಂತರರಾಷ್ಟಿçÃಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.
ಅರೆಯಡ ಗಿರೀಶ್, ಮಂದಪAಡ ಮನೋಜ್, ಅರೆಯಡ ಸವಿತಾ, ಚೋಳಪಂಡ ಜ್ಯೋತಿ ನಾಣಯ್ಯ, ಅಲ್ಮಂಡ ಜೈ, ಕಾಂಡೆರ ಸುರೇಶ್, ಚಂಬAಡ ಜನತ್, ಬೇಪಡಿಯಂಡ ಬಿದ್ದಪ್ಪ, ಪುಟ್ಟಿಚಂಡ ದೇವಯ್ಯ, ಚೋಳಪಂಡ ನಾಣಯ್ಯ, ಪಾರ್ವಂಗಡ ನವೀನ್ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.