ವೀರಾಜಪೇಟೆ, ಮಾ. ೨೪: ಮೀನುಪೇಟೆಯ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಸ್ಥಾನದ ೮೦ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ ೩ ದಿನಗಳ ಕಾಲ ಸಕಲ ಪೂಜಾ ವಿಧಿವಿಧಾನಗಳೊಂದಿಗೆ ಅತಿ ವಿಜೃಂಭಣೆಯಿAದ ಆಚರಿಸಲಾಯಿತು.

ತಾ. ೧೯ ರಂದು ಬೆಳಿಗ್ಗೆ ೫ ಗಂಟೆಗೆ ಗಣಪತಿ ಹೋಮ, ಬಳಿಕ ಧ್ವಜಾರೋಹಣ, ಸಂಜೆ ಶ್ರೀ ಮುತ್ತಪ್ಪ ವೆಳ್ಳಾಟಂ ನಡೆಯಿತು. ತಾ. ೨೦ ರಂದು ಮಧ್ಯಾಹ್ನ ೨ ಗಂಟೆಗೆ ದೇವರ ಮಲೆ ಇಳಿಸುವುದು, ಸಂಜೆ ೫ ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, ಬಳಿಕ ೫.೩೦ ಗಂಟೆಗೆ ತೆಲುಗರ ಬೀದಿಯಿಂದ ಮೊದ ಕಲಶದೊಂದಿಗೆ ತಾಲಪ್ಪೊಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಚಂಡೆ ಮೇಳ, ವಾದ್ಯಗೋಷ್ಠಿಯೊಂದಿಗೆ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಲಾಯಿತು.

ಪಂಜರುಪೇಟೆ ಮುತ್ತಪ್ಪ ಸೇವಾ ಸಮಿತಿ ಹಾಗೂ ಕಲ್ಲುಬಾಣೆ ಮುತ್ತಪ್ಪ ಸೇವಾ ಸಮಿತಿ ಸದಸ್ಯರುಗಳು ಕಲಶ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ೬ ಗಂಟೆಯಿAದ ಮುತ್ತಪ್ಪ ದೇವಾಲಯದಲ್ಲಿ ಕುಟ್ಟಿಚಾತನ್, ಗುಳಿಗನ್, ವಸೂರಿಮಾಲ, ಪೋದಿ, ವಿಷ್ಣುಮೂರ್ತಿ ವೆಳ್ಳಾಟಂ ನಡೆಯಿತು. ತಾ. ೨೧ ರಂದು ಪ್ರಾತಃಕಾಲ ೧ ಗಂಟೆಗೆ ಶಾಸ್ತಪ್ಪನ್ ಹಾಗೂ ಗುಳಿಗನ ಕೋಲ, ೪ ಗಂಟೆಗೆ ತಿರುವಪ್ಪನ ತೆರೆ, ಭಗವತಿ ತೆರೆ, ವಸೂರಿಮಾಲ, ವಿಷ್ಣುಮೂರ್ತಿ ತೆರೆ ನಡೆಯಿತು. ಮಧ್ಯಾಹ್ನ ೧೨ ಗಂಟೆಗೆ ಅನ್ನಸಂತರ್ಪಣೆ ಬಳಿಕ ೩ ಗಂಟೆಗೆ ವಿಷ್ಣುಮೂರ್ತಿ ವಾರಣದೊಂದಿಗೆ ೨೦೨೪ ಸಾಲಿನ ಶ್ರೀ ಮುತ್ತಪ್ಪ ತೆರೆ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.