ಕುಶಾಲನಗರ, ಮಾ.೨೪: ಕುಶಾಲನಗರ ಗಡಿಭಾಗದ ವಾಹನ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ಸಿಬ್ಬಂದಿಗಳು ಜಿಲ್ಲೆ ಮೂಲಕ ಸಾಗುವ ಸರಕಾರಿ ಬಸ್‌ಗಳನ್ನು ನಿಲ್ಲಿಸಿ ಹಣ ಸಾಗಾಟ ಬಗ್ಗೆ ಪರಿಶೀಲನೆ ನಡೆಸಿದರು.

ಕುಶಾಲನಗರ ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ಚುನಾವಣಾ ಅಧಿಕಾರಿ ಟಿ. ವೆಂಕಟೇಶ್ ನೇತೃತ್ವದಲ್ಲಿ ಮೈಸೂರು ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಡೆಯಿಂದ ತಪಾಸಣಾ ಕೇಂದ್ರ ಮೂಲಕ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಸ್‌ಗಳಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆಗೆ ಒಳಪಡಿಸಿ ಅಕ್ರಮ ಹಣ ಸಾಗಾಟದ ಬಗ್ಗೆ ಪರಿಶೀಲನೆ ನಡೆಸಿದರು.

ರಜೆ ದಿನವಾದ ಹಿನ್ನೆಲೆಯಲ್ಲಿ ಮೈಸೂರು ಕುಶಾಲನಗರ ಹೆದ್ದಾರಿ ರಸ್ತೆಯಲ್ಲಿ ವಾಹನಗಳ ಸಂಚಾರದ ದಟ್ಟಣೆ ಅಧಿಕವಾಗಿತ್ತು. ಪ್ರತಿಯೊಂದು ವಾಹನಗಳ ತಪಾಸಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಗಡಿ ಭಾಗದಿಂದ ಕೊಪ್ಪ ಕಡೆಗೆ ೨ ಕಿ.ಮೀ. ಉದ್ದಕ್ಕೂ ವಾಹನಗಳು ಸಾಲಾಗಿ ನಿಂತಿದ್ದ ದೃಶ್ಯ ಗೋಚರಿಸಿತು.

ಈ ಸಂದರ್ಭ ಚುನಾವಣಾ ಅಧಿಕಾರಿಗಳ ತಂಡದ ಸದಸ್ಯರಾದ ವಿಜಯಾನಂದ, ಮಂಜು, ಪಿಎಸ್‌ಐ ಬಿ.ಎಸ್. ಉಮಾ, ಪೊಲೀಸ್ ಸಿಬ್ಬಂದಿಗಳಾದ ಸಿದ್ದರಾಜು, ಮಹೇಶ್ ,ಜಯಪ್ರಕಾಶ್, ಮತಿತರರು ಇದ್ದರು.