ಸೈನಿಕರೊಂದಿಗೆ ಹೋಳಿ ಆಚರಿಸಿದ ರಾಜನಾಥ್ ಸಿಂಗ್

ಲೇಹ್, ಮಾ. ೨೪: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಲೇಹ್‌ನಲ್ಲಿ ಸೈನಿಕರೊಂದಿಗೆ ಹೋಳಿ ಹಬ್ಬವನ್ನು ಆಚರಿಸಿದರು. ಹೋಳಿ ಸಂಭ್ರಮದಲ್ಲಿ ಸಚಿವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇದ್ದರು. ಯೋಧರ ಹಣೆಗೆ ತಿಲಕವನ್ನು ಹಚ್ಚುವ ಮೂಲಕ ಸಿಂಗ್ ಹೋಳಿ ಹಬ್ಬವನ್ನು ಆಚರಿಸಿದರು. ನಂತರ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೆಹಲಿ ರಾಷ್ಟçದ ರಾಜಧಾನಿಯಾಗಿರುವಂತೆ, ಮುಂಬೈ ಆರ್ಥಿಕ ರಾಜಧಾನಿಯಾಗಿರುವಂತೆ ಲಡಾಖ್ ಭಾರತದ ಧೈರ್ಯ ಮತ್ತು ಶೌರ್ಯದ ರಾಜಧಾನಿಯಾಗಿದೆ ಎಂದು ಹೇಳಿದರು. ಐದು ವರ್ಷಗಳ ಹಿಂದೆ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಾಗ ಮೊದಲು ಸಿಯಾಚಿನ್‌ಗೆ ಭೇಟಿ ನೀಡಿದ್ದೆ. ಆದರೆ, ಇಂದು ಅಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿನ ಸೈನಿಕರಿಗೆ ಹೋಳಿ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ ಎಂದು ಅವರು ತಿಳಿಸಿದರು.

ವಾಯುಪಡೆ ಮಾಜಿ ಮುಖ್ಯಸ್ಥ ಬಿಜೆಪಿ ಸೇರ್ಪಡೆ

ನವದೆಹಲಿ, ಮಾ. ೨೪: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ ಭಾನುವಾರ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಬದೌರಿಯಾ, ತಮ್ಮ ಸೇವೆಯಲ್ಲಿ ಕಳೆದ ಎಂಟರಿAದ ೧೦ ವರ್ಷಗಳನ್ನು ‘ಸುವರ್ಣ ಅವಧಿ' ಎಂದು ಬಣ್ಣಿಸಿದರು. ಸ್ವಾವಲಂಬನೆಯನ್ನು ಹೆಚ್ಚಿಸಲು ಮತ್ತು ಸಶಸ್ತç ಪಡೆಗಳನ್ನು ಆಧುನೀಕರಿಸಲು ಮೋದಿ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಿದರು. ವಿವಿಧ ಇಲಾಖೆಗಳಾದ್ಯಂತ ತೆಗೆದುಕೊಂಡ ಕ್ರಮಗಳು ದೇಶವನ್ನು ಬಲಿಷ್ಠವಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಮೇಕೆದಾಟು ಯೋಜನೆ ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿರಲಿ - ಹೆಚ್.ಡಿ.ಡಿ.

ಬೆಂಗಳೂರು, ಮಾ. ೨೪: ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ. ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು ಮನವಿ ಮಾಡುವುದಾಗಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕಠಿಣವಾದ ನಿಲುವು ಪ್ರಕಟಿಸಿದ್ದಾರೆ. ಈ ಬಗ್ಗೆ ಭಯಪಡಬೇಕಾಗಿಲ್ಲ. ನಾವು ಕೂಡಾ ಯೋಜನೆಯನ್ನು ಬೆಂಬಲಿಸುವ ತೀರ್ಮಾನವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸುತ್ತೇವೆ ಎಂದರು. ನಾವು ಮಾತ್ರವಲ್ಲ, ಸರ್ಕಾರ, ಮುಖ್ಯಮಂತ್ರಿ, ಬಿಜೆಪಿ, ಯಡಿಯೂರಪ್ಪ ಎಲ್ಲರೂ ಈ ಚುನಾವಣೆ ಮುಗಿದ ಬಳಿಕ ಮೇಕೆದಾಟು ಜಲಾಶಯ ನಿರ್ಮಿಸುತ್ತೇವೆ ಎಂದು ತೀರ್ಮಾನವನ್ನು ಮಾಡೋಣ ಎಂದು ಹೇಳಿದರು.

ಟ್ರಕ್ ಹರಿಸಿ ಐವರ ಹತ್ಯೆ

ಜಲ್ವಾರ್, ಮಾ. ೨೪: ಪೊಲೀಸ್ ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐವರನ್ನು ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ವಾಹನ ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಡರಾತ್ರಿ ಯಾವುದೋ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ವಿವಾದಕ್ಕೆ ಕಾರಣ ತಿಳಿದುಬಂದಿಲ್ಲ, ಇಬ್ಬರು ಸಹೋದರರು ಸೇರಿದಂತೆ ಐವರು ಪೊಲೀಸ್ ಠಾಣೆಗೆ ದೂರು ದಾಖಲಿಸುವುದಾಗಿ ಎರಡು ಮೋಟಾರು ಸೈಕಲ್‌ನಲ್ಲಿ ಹೊರಟ್ಟಿದ್ದರು. ಇವರನ್ನು ತಡೆದ ಆರೋಪಿಗಳು ಟ್ರಕ್‌ನ್ನು ಮೋಟಾರ್ ಸೈಕಲ್ ಮೇಲೆ ಹರಿಸಿ, ಸ್ಥಳದಲ್ಲಿಯೇ ನಾಲ್ವರನ್ನು ಹತ್ಯೆ ಮಾಡಿದ್ದಾರೆ.ಗಾಯಗೊಂಡಿದ್ದ ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಪಗಾರಿಯಾ ಠಾಣಾಧಿಕಾರಿ ವಿಜಯೇಂದ್ರ ಸಿಂಗ್ ತಿಳಿಸಿದ್ದಾರೆ. ವಿವಾದದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ,ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಲ್ ಆಫೀಸರ್ ಪ್ರೇಮ್ ಕುಮಾರ್ ತಿಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ೩೦೨ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್‌ಹೆಚ್‌ಒ ವಿಜೇಂದ್ರ ಸಿಂಗ್ ಹೇಳಿದ್ದಾರೆ. ಮೃತಪಟ್ಟವರು ದಿನಗೂಲಿ ಕಾರ್ಮಿಕರಾಗಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಡ್ಡ ಮತದಾನ ಮಾಡಿದ ಶಾಸಕರಿಗೆ ‘ವೈ’ ಭದ್ರತೆ

ಲಖನೌ, ಮಾ. ೨೪: ಫೆಬ್ರವರಿ ೨೭ ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ. ಅಭಯ್ ಸಿಂಗ್ ಮನೋಜ್ ಕುಮಾರ್ ಪಾಂಡೆ, ರಾಕೇಶ್ ಪ್ರತಾಪ್ ಸಿಂಗ್ ಮತ್ತು ವಿನೋದ್ ಚತುರ್ವೇದಿ ಅವರಿಗೆ ವೈ-ಕೆಟಗರಿ ಭದ್ರತೆ ಕಲ್ಪಿಸಲಾಗಿದೆ.ಈ ನಾಲ್ವರು ಶಾಸಕರು, ಇತರ ಮೂರು ಪಕ್ಷದ ಶಾಸಕರಾದ ಪೂಜಾ ಪಾಲ್, ರಾಕೇಶ್ ಪಾಂಡೆ ಮತ್ತು ಅಶುತೋಷ್ ಮೌರ್ಯ ಅವರೊಂದಿಗೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದರು. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಸಂಜಯ್ ಸೇಠ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿ ಅಲೋಕ್ ರಂಜನ್ ಅವರನ್ನು ಸೋಲಿಸಿದ್ದರು. ವೈ-ಕೆಟಗರಿಯ ಭದ್ರತೆಯ ಭಾಗವಾಗಿ, ಎಂಟು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಈ ಶಾಸಕರಿಗೆ ಭದ್ರತೆ ನೀಡಲಿದ್ದಾರೆ. ಐವರು ಮನೆಗೆ ಭದ್ರತೆ ನೀಡಿದರೆ, ಉಳಿದ ಮೂವರು ಅವರೊಂದಿಗೆ ಸಂಚರಿಸಲಿದ್ದಾರೆ.

ಕೊಳವೆ ಬಾವಿ ಸಪುರ್ದಿಗೆ

ಬೆಂಗಳೂರು, ಮಾ. ೨೪: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-೧೯೬೪ರ ಕಲಂ ೩೩ ಮತ್ತು ೩೪ ರ ಅನುಸಾರ ಹಾಗೂ ಕರ್ನಾಟಕ ಅಂತರ್‌ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ ಅನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಬೇಸಿಗೆ ಕಾಲ ಮುಗಿಯುವವರೆಗೆ ಅಥವಾ ಮುಂದಿನ ಆದೇಶದವರೆಗೆ ೨೦,೦೦೦ ಚದರ ಅಡಿ ಮೇಲ್ಪಟ್ಟು ಕಟ್ಟಡ ನಿರ್ಮಾಣದ ಪ್ರದೇಶದಲ್ಲಿರುವ ಕೊಳವೆ ಬಾವಿಗಳನ್ನು ಮಂಡಳಿಯ ಸುರ್ಪದಿಗೆ ನೀಡುವಂತೆ ನೀರು ಸರಬರಾಜು ಮತ್ತು ಒಳಚರಂಡಿ ಆದೇಶಿಸಿದೆ.

ಜೈಲಿನಿಂದ ಮೊದಲ ಆದೇಶ ಹೊರಡಿಸಿದ ಕೇಜ್ರಿವಾಲ್

ನವದೆಹಲಿ, ಮಾ. ೨೪: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ ೨೧ ರಂದು ರಾಷ್ಟç ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ ನಿವಾಸದಲ್ಲಿ ಶೋಧದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಇಡಿ ಬಂಧನ ಮಾಡಿತ್ತು. ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಮೊದಲ ನಿರ್ದೇಶನವನ್ನು ಹೊರÀಡಿಸಿದ್ದಾರೆ. ಇದು ಜಲ ಇಲಾಖೆಗೆ ಸಂಬAಧಪಟ್ಟದ್ದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಜಲ ಸಚಿವೆ ಅತಿಶಿ ಅವರು ಇಂದು ಆದೇಶದ ಕುರಿತು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.