ಕೂಡಿಗೆ, ಮಾ. ೨೩: ಶಿರಂಗಾಲ ಗ್ರಾಮ ದೇವತಾ ಸಮಿತಿಯ ವತಿಯಿಂದ ತಾ. ೨೫ ರಂದು ಶ್ರೀ ಉಮಾಮಹೇಶ್ವರ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ದೇವಾಲಯದ ಆವರಣದಲ್ಲಿ ಹೋಮ-ಹವನ, ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ನಂತರ ಶ್ರೀ ಸ್ವಾಮಿಯ ವಿಗ್ರಹವನ್ನು ಭವ್ಯ ಅಲಂಕೃತವಾದ ರಥದಲ್ಲಿ ಕುಳ್ಳಿರಿಸಿ, ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ.

ರಥದ ಮುಂಭಾಗದಲ್ಲಿ ಮಂಗಳ ವಾದ್ಯ, ಡೊಳ್ಳುಕುಣಿತ, ವೀರಗಾಸೆ ತಂಡದವರಿAದ ವಿವಿಧ ಪ್ರದರ್ಶನಗಳು ನಡೆಯಲಿವೆ. ತಾ. ೨೬ ಹಾಗೂ ೨೭ ರಂದು ದೇವಾಲಯದ ಆವರಣದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ತೆಪ್ಪೋತ್ಸವ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಗ್ರಾಮ ದೇವತಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.ತಾ. ೨೫ ರಂದು ಶಿರಂಗಾಲ ಉಮಾಮಹೇಶ್ವರ ರಥೋತ್ಸವ

ಕೂಡಿಗೆ, ಮಾ. ೨೩: ಶಿರಂಗಾಲ ಗ್ರಾಮ ದೇವತಾ ಸಮಿತಿಯ ವತಿಯಿಂದ ತಾ. ೨೫ ರಂದು ಶ್ರೀ ಉಮಾಮಹೇಶ್ವರ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ದೇವಾಲಯದ ಆವರಣದಲ್ಲಿ ಹೋಮ-ಹವನ, ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ನಂತರ ಶ್ರೀ ಸ್ವಾಮಿಯ ವಿಗ್ರಹವನ್ನು ಭವ್ಯ ಅಲಂಕೃತವಾದ ರಥದಲ್ಲಿ ಕುಳ್ಳಿರಿಸಿ, ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ.

ರಥದ ಮುಂಭಾಗದಲ್ಲಿ ಮಂಗಳ ವಾದ್ಯ, ಡೊಳ್ಳುಕುಣಿತ, ವೀರಗಾಸೆ ತಂಡದವರಿAದ ವಿವಿಧ ಪ್ರದರ್ಶನಗಳು ನಡೆಯಲಿವೆ. ತಾ. ೨೬ ಹಾಗೂ ೨೭ ರಂದು ದೇವಾಲಯದ ಆವರಣದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ತೆಪ್ಪೋತ್ಸವ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಗ್ರಾಮ ದೇವತಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.