ಮಡಿಕೇರಿ, ಮಾ. ೨೩: ಸಿವಿಲ್ ಸರ್ವಿಸ್ ಪರೀಕ್ಷೆ ಬಗ್ಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಉಚಿತ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ತಾ.೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಕಾರ್ಯಾಗಾರ ನಡೆಯಲಿದ್ದು, ಜಿಲ್ಲೆಯ ಆಸಕ್ತ ಪದವಿ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಸಿವಿಲ್ ಸರ್ವಿಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಇರುವ ಪ್ರಶ್ನೆಗಳಿಗೆ ನಮ್ಮ ಕೆ.ಪಿ.ಎಸ್.ಸಿ ಸಂಸ್ಥೆ ಸ್ಥಾಪಕ ಅರ್ಜುನ್ ಬೋಪಣ್ಣ ಅವರ ಮಾರ್ಗದರ್ಶನದಲ್ಲಿ ಪ್ರಶ್ನೋತ್ತರ ಕಾರ್ಯಾಗಾರ ನಡೆಯಲಿದೆ.