ಮಡಿಕೇರಿ, ಮಾ. ೨೫: ಮಡಿಕೇರಿಯ ವಾಂಡರರ್ಸ್ ಸ್ಟೋರ್ಟ್ಸ್ ಕ್ಲಬ್ ವತಿಯಿಂದ ಏ.೧ರಿಂದ ಮೇ ೨ರವರೆಗೆ ೩೦ನೇ ವರ್ಷದ ಉಚಿತ ಬೇಸಿಗೆ ಶಿಬಿರ ನಡೆಯಲಿದೆ ಎಂದು ಕ್ಲಬ್ನ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕ್ಲಬ್ನ ಸಂಚಾಲಕ ಶ್ಯಾಂ ಪೂಣಚ್ಚ ಮಾತನಾಡಿ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿದಿನ ಬೆಳಿಗ್ಗೆ ೬.೩೦ ಗಂಟೆಯಿAದ ೮.೩೦ರವರೆಗೆ ಶಿಬಿರ ನಡೆಯಲಿದ್ದು, ೬ರಿಂದ ೧೬ ವರ್ಷದ ಬಾಲಕ - ಬಾಲಕಿಯರಿಗೆ ಹಾಕಿ, ಯೋಗ, ಪ್ರಾಣಾಯಾಮ ಹಾಗೂ ಅಥ್ಲೆಟಿಕ್ಸ್ನಲ್ಲಿ ನುರಿತ ತರಬೇತುದಾರರಿಂದ ತರಬೇತಿ ಕೊಡಿಸಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಉಚಿತವಾಗಿ ಬ್ರೆಡ್, ಬಾಳೆಹಣ್ಣು, ಮೊಟ್ಟೆ, ಹಾಲನ್ನು ನೀಡಲಾಗುವುದು. ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಬಿರವನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿಯಿತ್ತರು. ಏಪ್ರಿಲ್ ಕೊನೆಯ ವಾರದಲ್ಲಿ ಮಕ್ಕಳು ಹಾಗೂ ಪೋಷಕರಿಗೆ ಚಾರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದರು.
ಕಳೆದ ೩೦ ವರ್ಷಗಳಿಂದ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳ ಪೈಕಿ ಅನೇಕರು ರಾಜ್ಯ, ರಾಷ್ಟç, ಅಂತರ ರಾಷ್ಟಿçÃಯ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಹಲವಷ್ಟು ಮಂದಿ ಕ್ರೀಡಾ ವಸತಿ ಶಾಲೆಗಳಿಗೂ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಕ್ಲಬ್ನ ಕಾರ್ಯದರ್ಶಿ ಪಾರ್ಥ ಚಂಗಪ್ಪ ಮಾತನಾಡಿ, ಶಿಬಿರ ಈಗಾಗಲೇ ಆರಂಭಗೊAಡಿದೆಯಾದರೂ ಹಿರಿಯ ತರಬೇತುದಾರ ದಿ.ಸಿ.ವಿ. ಶಂಕರ್ ಅವರ ಹುಟ್ಟುಹಬ್ಬದ ದಿನವಾದ ಏ.೧ರಂದು ಶಿಬಿರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರು ೯೪೪೮೮೯೫೯೫೦, ೯೪೪೮೮೭೩೯೯೯ ಸಂಖ್ಯೆಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದೆAದರು.
ತರಬೇತುದಾರ ಕುಡೆಕಲ್ ಸಂತೋಷ್ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವುದರ ಜೊತೆಗೆ ಅವರುಗಳ ಆರೋಗ್ಯವನ್ನು ಉತ್ತಮಗೊಳಿಸುವ ಉದ್ದೇಶದಿಂದ ಶಿಬಿರ ಏರ್ಪಡಿಸಲಾಗಿದೆ. ನುರಿತ ತರಬೇತುದಾರರು ತರಬೇತಿ ನೀಡಲಿದ್ದಾರೆ. ಶಿಬಿರದಲ್ಲಿ ಭಾಗವಹಿಸುವ ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ಕೂಡ ನೀಡಲಾಗುವುದೆಂದರು. ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಬಾಬು ಸೋಮಯ್ಯ ಉಪಸ್ಥಿತರಿದ್ದರು.