ಕೂಡಿಗೆ, ಮಾ. ೨೫: ಕುಶಾಲನಗರ ತಾಲೂಕು ತಹಶೀಲ್ದಾರರ ನೇತೃತ್ವದ ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಆದ್ಯತೆಯ ಆಧಾರದ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ.
ಈಗಾಗಲೇ ಅನೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತದಿಂದಾಗಿ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಟ್ಯಾಂಕರ್ ಮೂಲಕ ಆಯಾ ಗ್ರಾಮಗಳಿಗೆ ಕುಡಿಯುವ ನೀರನ್ನು ವಿತರಣೆ ಮಾಡಲಾಗುತ್ತಿದೆ.
ಈಗಾಗಲೇ ಕೂಡುಮಂಗಳೂರು, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಮನವಿ ಮೇರೆಗೆ ಅಯಾ ಗ್ರಾಮ ಪಂಚಾಯಿತಿಗಳಿಗೆ ಕಂದಾಯ ಇಲಾಖೆ ಮುಖೇನ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.