ಕೂಡಿಗೆ, ಮಾ. ೨೪ : ಕರ್ನಾಟಕ ಸರ್ಕಾರ ೨೦೨೨-೨೩ನೇ ಸಾಲಿನಲ್ಲಿ ಘೋಷಿಸಿದ್ದ ಏಳು ನೂತನ ವಿಶ್ವ ವಿದ್ಯಾಲಯಗಳಲ್ಲೊಂದಾಗಿರುವ ಕೊಡಗು ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಒಂದು ವರ್ಷ ಸಮೀಪಿಸುತ್ತಿದ್ದು, ಇದೀಗ ತಾ.೨೮ಕ್ಕೆ ಪ್ರಥಮ ಸಂಸ್ಥಾಪನಾ ದಿನಾಚರಣೆಯ ಸಂಭ್ರಮದಲ್ಲಿದ್ದು, ಪ್ರಗತಿಯತ್ತ ದಾಪುಗಾಲಿಡುತ್ತಿದೆ.

ಪ್ರಾದೇಶಿಕ ಅಸಮತೋಲನವನ್ನು ನೀಗಿಸುವ ದೃಷ್ಟಿಯಿಂದ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ವಾರ್ಷಿಕ ನೋಂದಣಿ ಅನುಪಾತವನ್ನು (ಉಡಿoss ಇಟಿಡಿoಟಟmeಟಿಣ ಖಚಿಣio -ಉಇಖ) ಸುಧಾರಿಸುವ ನಿಟ್ಟಿನಲ್ಲಿ ಸಣ್ಣ ಸಣ್ಣ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಅಲ್ಲಿನ ಸಮುದಾಯಕ್ಕೆ ಉನ್ನತ ಶಿಕ್ಷಣದ ಅವಕಾಶವನ್ನು ಸ್ಥಳೀಯವಾಗಿ ಕಲ್ಪಿಸಿ ಯುವ ಜನಾಂಗವನ್ನು ದೇಶದ ಫಲಪ್ರದ ಸಂಪತ್ತಾಗಿ ಬೆಳೆಸಲು ಸಹಯೋಗ ನೀಡುವುದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (Uಟಿiveಡಿsiಣಥಿ ಉಡಿಚಿಟಿಣs ಛಿommissioಟಿ) ಮೂಲ ಆಶಯವಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಒಂದು ನಾಡಿನ ಪ್ರಗತಿಯ ಸಂಕೇತಗಳಲ್ಲೊAದಾಗಿದೆ. ಈ ನಿಟ್ಟಿನಲ್ಲಿ ಕೊಡಗು ವಿಶ್ವವಿದ್ಯಾಲಯದ ಸ್ಥಾಪನೆಯು ಕೊಡಗಿನ ಸಾಂಸ್ಕೃತಿಕ ಅಸ್ಮಿತೆ ಮತ್ತು ಶೈಕ್ಷಣಿಕ ಆಶೋತ್ತರಗಳನ್ನು ಗುರುತಿಸಿ, ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಒಂದು ಪ್ರಮುಖ ಮೈಲುಗಲ್ಲಾಗಿದೆ.

ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ -ಞuಞ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ೨೦೨೩ರ ಮೇ ೦೫ ರಂದು ಕರ್ನಾಟಕದ ರಾಜ್ಯಪಾಲರು ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಅನಾವರಣ ಗೊಳಿಸಿದ್ದರು. ಕೊಡಗು ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (Uಉಅ) ತನ್ನ ಅಧಿನಿಯಮ ೧೯೫೬ ರ ಪ್ರಕರಣ ೨ (ಎಫ್) ಅಡಿಯಲ್ಲಿ ೨೦೨೩ ರ ಜುಲೈ ೨೫ ರಂದು ಮಾನ್ಯತೆಯನ್ನು ನೀಡಿದ್ದು, ಯುಜಿಸಿ ಮಾನ್ಯತೆ ಸಿಕ್ಕಿರುವುದರಿಂದ ಯುಜಿಸಿ ಅಡಿಯಲ್ಲಿ ಬರುವಂತಹ ವಿವಿಧ ಪದವಿಗಳನ್ನು ನೀಡಲು ಕೊಡಗು ವಿಶ್ವವಿದ್ಯಾಲಯವು ಅಧಿಕೃತ ಮಾನ್ಯತೆ ಪಡೆದುಕೊಂಡಿದೆ.

ಕೊಡಗು ವಿಶ್ವವಿದ್ಯಾಲಯವು ಪರಸ್ಪರ ಸಂಶೋಧನೆ, ಬೋಧನೆ, ಕೌಶಲ್ಯಾಭಿವೃದ್ಧಿ, ಔದ್ಯೋಗಿಕ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ, ತಂತ್ರಜ್ಞಾನ ವಿನಿಮಯ ಮಾಡಿಕೊಂಡು ಕೊಡಗು ವಿಶ್ವವಿದ್ಯಾಲಯದ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಲವಾರು ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡಿದೆ. ಕರ್ನಾಟಕದ ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರಿನ ಫೋರ್ಕ್ ಟೆಕ್ನಾಲಜಿಸ್ ಸಹಯೋಗದೊಂದಿಗೆ ಕೊಡಗು ವಿಶ್ವವಿದ್ಯಾಲಯದ ಅಧ್ಯಾಪಕರುಗಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಗಾರಗಳನ್ನು ಆಯೋಜಿಸಿದೆ. ಅಷ್ಟೇ ಅಲ್ಲದೆ ಧಾರವಾಡದ ಬಹು ಶಾಸ್ತಿçÃಯ ವಿಕಾಸ ಸಂಶೋಧನಾ ಕೇಂದ್ರ, ಭಾರತ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಹೈದರಾಬಾದಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ನಿರ್ವಹಣೆ ಸಂಸ್ಥೆ ಹಾಗೂ ಪ್ರಾಜೆಕ್ಟ್ ಕಾವೇರಿ ಎಂಬ ಹೆಸರಿನಲ್ಲಿ ಕೊಡಗು ಅಂಚೆ ಇಲಾಖೆ ತಮಿಳುನಾಡಿನ ತಂಜಾವೂರಿನಲ್ಲಿರುವ ಭಾರತ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ರಾಷ್ಟಿçÃಯ ಆಹಾರ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆ, ಐಸಿಎಆರ್-ಐಐಎಸ್‌ಆರ್, ಕೋಜಿಕೊಡ್, ಕೇರಳ ಹಾಗೂ ಐಬಿಎಂ ಅನುದೀಪ್ ಫೌಂಡೇಶನ್, ಬೆಂಗಳೂರು ಮೊದಲಾದ ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಸಂಸ್ಥೆಗಳ ಜೊತೆಗೆ ಕೊಡಗು ವಿಶ್ವವಿದ್ಯಾಲಯವು ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.

ಕೊಡಗು ವಿಶ್ವವಿದ್ಯಾಲಯವು ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ೨೦೨೩-೨೪ ನೇ ಶೈಕ್ಷಣಿಕ ಸಾಲಿನಲ್ಲಿ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರವೇಶಾತಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿತ್ತು. ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಲ್ಲಿ ೧೦೨೫ ಪುರುಷ ವಿದ್ಯಾರ್ಥಿಗಳು ೩ಐದನೇ ಪುಟಕ್ಕೆ