ಮಡಿಕೇರಿ, ಮಾ. ೨೫: ಮಾಜಿ ಸಚಿವರು, ಕೊಡಗು ಜಿಲ್ಲಾ ಕಾಂಗ್ರೆಸ್ನಲ್ಲಿ ಪ್ರಮುಖರಾಗಿದ್ದ ದಿವಂಗತ ಟಿ. ಜಾನ್ ಅವರ ಪುತ್ರ ಡಾ. ಥಾಮಸ್ ಜಾನ್ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ಹಾಗೂ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಂಡಿರುವುದಾಗಿ ಹೇಳಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ರಿಶ್ಚಿಯನ್ ಸಮುದಾಯದಲ್ಲಿ ಪ್ರಮುಖರಾಗಿರುವ ಡಾ. ಥಾಮಸ್ ಜಾನ್ ಅವರ ತಂದೆ ಟಿ. ಜಾನ್ ಈ ಹಿಂದೆ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದರು.