ಸೋಮವಾರಪೇಟೆ, ಮಾ. ೨೪: ಸಕಲ ಜೀವರಾಶಿಗಳಿಗೂ ಅತೀ ಅಗತ್ಯವಾಗಿರುವ ನೀರಿನ ಮಹತ್ವ ವನ್ನು ಎಲ್ಲರೂ ಅರಿತುಕೊಂಡು, ಅದರ ಸಂರಕ್ಷಣೆಗೆ ಪ್ರತಿಯೋರ್ವರೂ ಮುಂದಾಗಬೇಕು ಎಂದು ಇಲ್ಲಿನ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಕರೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಆಶ್ರಯದಲ್ಲಿ, ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀರಿಲ್ಲದೇ ಮಾನವನ ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಾಕೃತಿಕವಾಗಿ ಲಭ್ಯವಿರುವ ನೀರನ್ನು ಪೋಲು ಮಾಡದಂತೆ ಎಲ್ಲರೂ ಜಾಗ್ರತೆ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಪೋಲು ಕಂಡುಬAದರೆ ತಕ್ಷಣ ಸರಿಪಡಿಸಬೇಕು. ಸರ್ಕಾರಗಳು ಜಾರಿಗೊಳಿಸುವ ಕಾನೂನು ಹಾಗೂ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಜೀವ ಜಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ವಕೀಲರಾದ ಹೆಚ್.ಎಸ್. ವೆಂಕಟೇಶ್ ಅವರು, ಜಲಮೂಲಗಳ ಸಂರಕ್ಷಣೆಯೊAದಿಗೆ, ಹಸಿರೀಕರಣಕ್ಕೆ ಆದ್ಯತೆ ನೀಡಬೇಕು. ದಿನಬಳಕೆಯಲ್ಲಿ ನೀರಿನ ಮಿತವ್ಯಯ ಮಾಡಬೇಕು. ನೀರಿನ ಪುನರ್ಬಳಕೆಗೆ ಹೆಚ್ಚು ಒತ್ತು ನೀಡಬೇಕು. ಹಸಿರು ಉಳಿದರೆ ಮಾತ್ರ ನೀರು, ನೀರಿದ್ದರೆ ಮಾತ್ರ ಜೀವನ ಎಂಬುದನ್ನು ಮರೆಯಬಾರದು ಎಂದರು.

ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಮಾತನಾಡಿ, ನೀರಿನ ಮಲಿನತೆಯನ್ನು ತಡೆಗಟ್ಟುವಲ್ಲಿ ಎಲ್ಲರೂ ಜವಾಬ್ದಾರಿ ತೋರಬೇಕು. ಕೆರೆ, ಹೊಳೆ, ನದಿ, ತೊರೆಗಳ ಸಂರಕ್ಷಣೆ ಆಗಬೇಕು. ಸರ್ಕಾರದ ಮಳೆಕೊಯ್ಲು, ಕೆರೆ ನಿರ್ಮಾಣ, ಇಂಗು ಗುಂಡಿ ಯಂತಹ ಯೋಜನೆಗಳನ್ನು ಪರಿಣಾ ಮಕಾರಿಯಾಗಿ ಅನುಷ್ಠಾನಗೊಳಿಸ ಬೇಕು ಎಂದು ಅಭಿಪ್ರಾಯಿಸಿದರು.

ವರ್ಷದ ೪ ತಿಂಗಳುಗಳು ಕಾಲ ನೀರಿರುತ್ತಿದ್ದ ಗದ್ದೆಗಳು ಇತ್ತೀಚೆಗೆ ತೋಟ, ಬಡಾವಣೆಗಳಾಗಿ ಮಾರ್ಪಡುತ್ತಿವೆ. ಕಾಂಕ್ರಿಟೀಕರಣದಿAದ ನೀರಿನ ಇಂಗುವಿಕೆಗೆ ತಡೆಯಾಗಿದೆ. ನೀರಿನ ಸಂರಕ್ಷಣೆಗೆ ಸಮಗ್ರ ಯೋಜನೆ ರೂಪಿತಗೊಳ್ಳಬೇಕು. ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ತಾಲೂಕು ತಹಶೀಲ್ದಾರ್ ನವೀನ್‌ಕುಮಾರ್ ಮಾತನಾಡಿ, ಜಲ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿ ಎಂದು ಭಾವಿಸದೇ ಸಾರ್ವಜನಿಕರೂ ಸಹ ಸಾಮೂಹಿಕ ಜವಾಬ್ದಾರಿ ನಿರ್ವಹಿಸಬೇಕು ಎಂದರು. ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀರಿಗೆ ಸಂಬAಧಿಸಿ ದಂತೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕೇಂದ್ರ ಸರ್ಕಾರದ ಅಮೃತ್ ಸರೋವರ ಯೋಜನೆಯಡಿ ತಾಲೂಕಿನಲ್ಲಿ ೪೩ ಕೆರೆಗಳ ಪುನಶ್ಚೇತನಕ್ಕೆ ಕ್ರಮ ವಹಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.