ಮಡಿಕೇರಿ, ಮಾ. ೨೪: ಓ.ಡಿ.ಪಿ. ಸಂಸ್ಥೆ, ಮಹಿಳೋದಯ ಮಹಿಳಾ ಒಕ್ಕೂಟ, ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ನಗರದ ಬಸಪ್ಪ ಶಿಶುವಿಹಾರದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ನಿವೃತ್ತ ಪ್ರಾಂಶುಪಾಲೆ ಶ್ಯಾಮಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆ ಸಮಾಜದ ಅವಿಭಾಜ್ಯ ಅಂಗ. ಕೌಟುಂಬಿಕ ಹಾಗೂ ಸಾಮಾಜಿಕವಾಗಿಯೂ ತೊಡಗಿಸಿಕೊಂಡು ತನ್ನ ಸಾಮರ್ಥ್ಯವನ್ನು ತೋರುತ್ತ ಉತ್ತಮ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು, ಮಕ್ಕಳನ್ನು ಸತ್ಪçಜೆಯಾಗಿ ರೂಪಿಸುವಲ್ಲಿ ತಾಯಿಯರ ಪಾತ್ರ ಅಪಾರವಾಗಿದೆ. ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು.

ಓ.ಡಿ.ಪಿ. ಸಂಸ್ಥೆಯ ಜಿಲ್ಲಾ ಸಂಯೋಜಕಿ ಜಾಯ್ಸ್ ಮಿನೇಜೆಸ್ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತ ಪುರುಷ ಪ್ರಧಾನ ಸಮಾಜದಲ್ಲಿ ಮುನ್ನುಗುತ್ತಿರು ವುದು ಪ್ರಶಂಸನೀಯ ಎಂದರು.

ಮಹಿಳೋದಯ ಮಹಿಳಾ ಒಕ್ಕೂಟ ಅಧ್ಯಕ್ಷೆ ತಾರಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಲೀನಾ ಲೋಬೋ, ವಿಜಯ ನಾರಾಯಣ, ಬೇಬಿ ಪೂವಯ್ಯ, ಲೂಸಿ ಜೇಮ್ಸ್, ಹೀನಾ, ಮೇರಿ, ಶೋಭಾ, ರೇಣುಕುಮಾರಿ, ಸಮೃದ್ಧಿ ಕೇಂದ್ರ ಸಮಿತಿ ಅಧ್ಯಕ್ಷೆ ರಕ್ಷಿತ ಸೇರಿದಂತೆ ಇನ್ನಿತರರು ಹಾಜರಿದ್ದರು. ಇದೇ ಸಂದರ್ಭ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.