ಮಡಿಕೇರಿ, ಮಾ. ೨೫: ಶಿಕ್ಷಣದ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಜಿಲ್ಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಎದುರಿಸಿದರು.

ಮಡಿಕೇರಿ, ವೀರಾಜಪೇಟೆ ತಾಲೂಕಿನಲ್ಲಿ ತಲಾ ೮, ಸೋಮವಾರಪೇಟೆ ತಾಲೂಕಿನ ೧೧ ಕೇಂದ್ರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೨೭ ಕೇಂದ್ರಗಳಲ್ಲಿ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಯಿತು. ಶಿಕ್ಷಣ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು. ಮೊದಲ ದಿನ ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳು ೩ಐದನೇ ಪುಟಕ್ಕೆ

ಸುಗಮವಾಗಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ

(ಮೊದಲ ಪುಟದಿಂದ) ಪರೀಕ್ಷೆ ಬರೆದರು. ಜಿಲ್ಲೆಯ ೧೭೧ ಪ್ರೌಢಶಾಲೆಯ ಒಟ್ಟು ೬,೧೨೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಗೊAಡಿದ್ದರು. ಈ ಪೈಕಿ ೬೦೭೬ ಹೊಸ ವಿದ್ಯಾರ್ಥಿಗಳು, ೪೭ ವಿದ್ಯಾರ್ಥಿಗಳು ಮರುಪರೀಕ್ಷೆ ಬರೆಯಬೇಕಾಗಿತ್ತು. ಆದರೆ, ೧೧೪ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಉಪನಿರ್ದೇಶಕ ಚಂದ್ರಕಾAತ್ ತಿಳಿಸಿದ್ದಾರೆ. ಪರೀಕ್ಷೆ ಹಿನ್ನೆಲೆ ಕೇಂದ್ರದ ೨೦೦ ಮೀಟರ್ ಅನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿತ್ತು. ಪೊಲೀಸ್ ಬಂದೋಬಸ್ತ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಮುಂಜಾಗ್ರತ ಕ್ರಮವಾಗಿ ನಿಯೋಜಿಸಲಾಗಿತ್ತು.