ಮಡಿಕೇರಿ, ಮಾ. ೨೬: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿಗೆ ಪ್ರತಿಷ್ಠೆಯ ಕಣವಾಗಿದ್ದು, ಸುಮಾರು ೨ಲಕ್ಷ ಮತಗಳ ಅಂತರದಿAದ ಯದುವೀರ್ ಅವರನ್ನು ಗೆಲ್ಲಿಸುವ ಗುರಿ ಹೊಂದಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ, ೧.೩೦ ಲಕ್ಷ ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು. ಈ ಬಾರಿ ಯದುವೀರ್ ಅವರು ೨ಲಕ್ಷ ಮತಗಳ ಅಂತರದಿAದ ಗೆಲುವು ಸಾಧಿಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ೮೫ ಸಾವಿರ ಮತಗಳ ಅಂತರವಿತ್ತು, ಈ ಬಾರಿ ೧ಲಕ್ಷಕ್ಕೂ ಅಧಿಕ ಗೆಲುವಿನ ಮತಗಳನ್ನು ನೀಡಲಿದ್ದೇವೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧೆ ಸಹಜವಾಗಿರುತ್ತದೆ, ಪ್ರತಿಸ್ಪರ್ಧಿಯನ್ನು ನಿರ್ಲಕ್ಷಿಸಿ ನಾವು ಮೈಮರೆಯುವುದಿಲ್ಲ, ಯದುವೀರ್ ಅವರ ಗೆಲುವಿಗಾಗಿ ನಿರಂತರ ಶ್ರಮ ವಹಿಸುತ್ತೇವೆ. ಈಗಾಗಲೇ ಬೂತ್ ಮಟ್ಟದಿಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದವರೆಗೂ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಕಳೆದ ೧೦ ತಿಂಗಳ ಅಭಿವೃದ್ಧಿ ಕಾರ್ಯಗಳೇ ಲೋಕಸಭಾ ಚುನಾವಣೆಯಲ್ಲಿ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಮತ್ತು ಈ ಹಿಂದಿನ ಸರಕಾರದ ಅನುದಾನದ ಕಾಮಗಾರಿಗಳು ಎನ್ನುವುದು ಜನರಿಗೆ ಈಗಾಗಲೇ ಅರ್ಥವಾಗಿದೆ. ಈ ಹಿಂದಿನ ಬಿಜೆಪಿ ಶಾಸಕರುಗಳು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ಶ್ರೀರಕ್ಷಯಾಗಲಿದೆ ಎಂದು ರವಿ ಕಾಳಪ್ಪ ತಿಳಿಸಿದರು.

ಏ.೩ ರಂದು ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಏ.೩ ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ ಎಂದರು.

ಇAದು ಬೃಹತ್ ಸಮಾವೇಶ

ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ತಾ.೨೭ ರಂದು (ಇಂದು) ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೊಡಗು ಉಸ್ತುವಾರಿ ಅಶ್ವತ್ಥ್ ನಾರಾಯಣ ಗೌಡ, ಅಭ್ಯರ್ಥಿ ಯದುವೀರ್, ಮಾಜಿ ಶಾಸಕ ರಾಮದಾಸ್, ಸಂಚಾಲಕ ರವಿ ಶಂಕರ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಾಜಿ ಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನಾಪಂಡ ರವಿ ಕಾಳಪ್ಪ ಮಾಹಿತಿ ನೀಡಿದರು.

ಬೋಗಸ್ ಶ್ವೇತಪತ್ರ

ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಬೋಗಸ್ ಶ್ವೇತಪತ್ರ ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಟೀಕಿಸಿದರು.

ಅವರು ಬಿಡುಗಡೆ ಮಾಡಿರುವ ಶ್ವೇತಪತ್ರದಲ್ಲಿ ಅರ್ಧದಷ್ಟು ಅನುದಾನ ಈ ಹಿಂದಿನ ಶಾಸಕ ಕೆ.ಜಿ.ಬೋಪಯ್ಯ ಅವರ ಅವಧಿಯದ್ದಾಗಿದೆ. ಜಿಲ್ಲೆಯ ಜನ ಬುದ್ಧಿವಂತರಾಗಿದ್ದು, ಇದನ್ನೆಲ್ಲ ನಂಬುವುದಿಲ್ಲ ಎಂದು ನುಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಜಿಲ್ಲಾ ವಕ್ತಾರ ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.