ಸೋಮವಾರಪೇಟೆ, ಮಾ.೨೫ : ತಾಲೂಕು ಜಾನಪದ ಪರಿಷತ್ ವತಿಯಿಂದ ತಾ. ೨೫ರಂದು (ಇಂದು) ಸಂಜೆ ೪ ಗಂಟೆಗೆ ಪತ್ರಿಕಾ ಭವನ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪರಿಷತ್‌ನ ಕಾರ್ಯದರ್ಶಿ ಎಂ.ಎ. ರುಬೀನಾ ತಿಳಿಸಿದ್ದಾರೆ.

ಸಂಜೆ ೪ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಷತ್‌ನ ತಾಲೂಕು ಅಧ್ಯಕ್ಷ ಕೆ.ಎ. ಪ್ರಕಾಶ್ ವಹಿಸಲಿದ್ದು, ದಿನದ ಅಂಗವಾಗಿ ಸೋಮವಾರಪೇಟೆಯ ವೈದ್ಯೆ ಶರ್ಮಿಳಾ ಫರ್ನಾಂಡೀಸ್ ಮತ್ತು ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಾದ ಶಶಿಕಲಾ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.