ಕುಶಾಲನಗರ, ಮಾ. ೨೬: ಕುಶಾಲನಗರದ ಕಾವೇರಿ ನದಿ ತಟದಲ್ಲಿ ಹುಣ್ಣಿಮೆಯ ಅಂಗವಾಗಿ ನಡೆದ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ನದಿ ತಟದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ ೧೫೭ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಅಷ್ಟೋತ್ತರ, ಕುಂಕುಮಾರ್ಚನೆ ನಂತರ ಮಹಾ ಆರತಿ ಬೆಳಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ಕಾವೇರಿ ನಾಡಿನ ಜನತೆಯನ್ನು ಜಲ ಕಂಟಕದಿAದ ಪಾರು ಮಾಡುವಂತೆ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಶ್ರೀ ಮುತ್ತಪ್ಪನ್ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರಾದ ಬಳಪಂಡ ಪವನ್, ಸ್ವಚ್ಛ ಕಾವೇರಿಗಾಗಿ ನಡೆಯುತ್ತಿರುವ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮೂಲದಿಂದ ಅಂತ್ಯ ತನಕ ಪ್ರಾಕೃತಿಕವಾಗಿ ಹರಿಯುವ ನದಿಯ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಜವಾಬ್ದಾರಿಯಾಗಿದೆ ಎಂದರು.

ಈ ಸಂದರ್ಭ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಸ್ವಚ್ಛತಾ ಅಭಿಯಾನದ ಪ್ರಮುಖರಾದ ಡಿ ಆರ್ ಸೋಮಶೇಖರ್, ಮಂಡೆಪAಡ ಬೋಸ್ ಮೊಣ್ಣಪ್ಪ ಮತ್ತಿತರರು ಇದ್ದರು.