ಕೂಡಿಗೆ, ಮಾ. ೨೬: ಪ್ರತಿಯೊಬ್ಬರೂ ನಾಳಿನ ಉತ್ತಮ ಭವಿಷ್ಯತ್ತಿಗಾಗಿ ನೀರನ್ನು ಮಿತವಾಗಿ ಬಳುಸುವುದರ ಮೂಲಕ ಜಲ ಸಂರಕ್ಷಣೆಗಾಗಿ ಪಣ ತೊಡಬೇಕಿದೆ ಎಂದು ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕ ಸಹಯೋಗದೊಂದಿಗೆ ಶಾಂತಿಗಾಗಿ ನೀರು ಎಂಬ ಧ್ಯೇಯದೊಂದಿಗೆ ವಿಶ್ವ ಜಲ ದಿನ ೨೦೨೪ ರ ಅಂಗವಾಗಿ ಏರ್ಪಡಿಸಿದ್ದ ಜಲ ಸಂರಕ್ಷಣಾ ಜಾಗೃತಿ ಆಂದೋಲನದಲ್ಲಿ ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿ ಜಲ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಕೃತಿಯ ಅತ್ಯಮೂಲ್ಯ ಸಂಪತ್ತಾದ ನೀರನ್ನು ಅಪವ್ಯಯ ಮಾಡದೇ ಸಂರಕ್ಷಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ನೀರನ್ನು ಸಂಗ್ರಹಿಸಿಡ ಬೇಕಾಗಿದೆ. ಮಳೆಯ ಸಂಗ್ರಹಣೆ ಹಾಗೂ ಅಂತರ್ಜಲ ಸಂರಕ್ಷ ಣೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಜಲ ದಿನದ ಮಹತ್ವ ಕುರಿತು ಮಾತನಾಡಿದ ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಜನರಲ್ಲಿ ಜಲ ಸಂರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ ೨೨ ರಂದು ವಿಶ್ವ ಜಲ ದಿನ ಎಂದು ಕರೆಯುವ ಅಂರ್ರಾಷ್ಟಿçÃಯ ಜಲ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಶಿಕ್ಷಕರಾದ ಕೆ. ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್. ಸುಜಾತ, ಎಸ್.ಎಂ. ಗೀತಾ, ಬಿ.ಎಸ್. ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಸಿಬ್ಬಂದಿ ಎಂ. ಉಷಾ, ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳು ಜಲ ಸಂರಕ್ಷಿಸಿ - ಜೀವ ಸಂಕುಲ ಉಳಿಸಿ, ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಿಸಿ, ನೀರನ್ನು ಮಿತವಾಗಿ ಬಳಸಿ, ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ, ನೀರಿಗಾಗಿ ಅರಣ್ಯ ಸಂರಕ್ಷಿಸಿ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸಿದರು.