ಕೂಡಿಗೆ, ಮಾ. ೨೬: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಕಾಶ್ ಬಡಾವಣೆಯಲ್ಲಿ ಕಳೆದ ಒಂದು ವರ್ಷಗಳಿಂದಲೂ ಚರಂಡಿ ವ್ಯವಸ್ಥೆಯ ಬಗ್ಗೆ ಅನೇಕ ಗ್ರಾಮ ಸಭೆ ಮಾಸಿಕ ಸಭೆಯಲ್ಲಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರೂ, ಇದುವರೆಗೂ ಚರಂಡಿ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಪ್ರಕಾಶ್ ಬಡಾವಣೆಯ ೨೦ ಕುಟುಂಬಗಳು ಲೋಕಸಭಾ ಚುನಾವಣೆಯನ್ನು ಬಹಿಷ್ಕ ರಿಸುವುದಾಗಿ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿವೆ.ವ್ಯವಸ್ಥೆಯನ್ನು ಸರಿಮಾಡಬೇಕು, ಅಲ್ಲದೆ ಸರಿ ಪಡಿಸದಿದ್ದರೆ ಮುಂದಿನ ತಿಂಗಳು ನಡೆಯುವ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ವಾರ್ಡ್ನ ನಿವಾಸಿಗಳಾದ ಸುಗುಣಾನಂದ, ಬಿ.ಕೆ. ಕೃಷ್ಣ, ಜಾಜಿ ರಾಮಚಂದ್ರ, ಗೋವಿಂದ, ಗ್ರಾಯಿತ್ರಿ, ಎಂ.ಕೆ. ದಾಕ್ಷಾಯಿಣಿ, ಎಂ.ಎಸ್. ಮಹೇಶ್, ದೇವರಾಜ್ ಮತ್ತಿತರರು ಕುಶಾಲನಗರ ತಾಲೂಕು ತಹಶೀ ಲ್ದಾರ್ ಕಿರಣ್ ಗೌರಯ್ಯ ಅವರಿಗೂ ಮನವಿ ಸಲ್ಲಿಸಿದರು.

ತಹಶೀಲ್ದಾರ್ ಭೇಟಿ

ನಿವಾಸಿಗಳ ಮನವಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ಕಿರಣ್ ಗೌರಯ್ಯ, ಚರಂಡಿ ವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದರು. ತಾತ್ಕಾಲಿಕವಾಗಿ ಇಂಗು ಗುಂಡಿಯನ್ನು ತೆಗೆಯುವಂತೆ ಸೂಚಿಸಿದರು. ಈ ವೇಳೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್, ಕಂದಾಯ ಇಲಾಖೆಯ ನಿರೀಕ್ಷಕ ಸಂತೋಷ್, ಅಭಿವೃದ್ಧಿ ಅಧಿಕಾರಿ ಎಂ.ಎಸ್. ಸಂತೋಷ್, ಪ್ರಕಾಶ್ ಬಡಾವಣೆಯ ನಿವಾಸಿಗಳು ಹಾಜರಿದ್ದರು.