*ಗೋಣಿಕೊಪ್ಪ, ಮಾ. ೨೫: ನಮ್ಮ ಕನಸಿನ ನಮ್ಮ ಕಲ್ಪನೆಯ ಭಾರತ ನಿರ್ಮಾಣಕ್ಕಾಗಿ ಮೋದಿ ಸರ್ಕಾರವನ್ನು ಮತ್ತೊಮ್ಮೆ ಗೆಲ್ಲಿಸಬೇಕಾದ ಅಗತ್ಯತೆ ಇದ್ದು, ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಅಮೂಲ್ಯವಾದ ಶಕ್ತಿಯನ್ನು ತುಂಬಬೇಕಾಗಿದೆ ಎಂದು ಬಿಜೆಪಿ ಪಕ್ಷದ ಕೊಡಗು-ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ ಒಡೆಯರ್ ಕರೆ ನೀಡಿದರು.
ತಿತಿಮತಿ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ತಿತಿಮತಿ, ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ ಪಂಚಾಯಿತಿಗಳ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾವೇರಿ ತವರು ಕೊಡಗಿಗೂ ಮತ್ತು ಮೈಸೂರಿಗೂ ಅವಿನಾಭಾವ ಸಂಬAಧವಿದೆ. ಸಂಬAಧವನ್ನು ಮುಂದುವರಿಸುವ ಉದ್ದೇಶ ದೊಂದಿಗೆ ಮತ್ತು ಈ ಭಾಗದ ಜನರ ಸೇವೆ ಮಾಡುವ ಆಕಾಂಕ್ಷೆಯೊAದಿಗೆ ಚುನಾವಣೆ ಕಣಕ್ಕೆ ಇಳಿದಿದ್ದೇನೆ.
ಪಕ್ಷದ ಆತ್ಮ ಬಲವಾಗಿರುವ ಕಾರ್ಯಕರ್ತರು ದೇಶ ಮುನ್ನಡೆಸುವ ಮತ್ತು ಅಭಿವೃದ್ಧಿಪಡಿಸುವ ಕರ್ತವ್ಯಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಪ್ರಪಂಚವೇ ನಿಬ್ಬೆರಗಾಗಿ ನೋಡುವ ವಾತಾವರಣವನ್ನು ನಿರ್ಮಿಸಲಾಗಿದೆ. ಹಿಂದೆ ಅರಸ ಮನೆತನದವರು ಮೈಸೂರು ರಾಜ್ಯವನ್ನು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು. ಸ್ವದೇಶಿ ಉತ್ಪನ್ನಗಳಿಗೆ ಸಾಕಷ್ಟು ಒತ್ತು ನೀಡಿ ಮೈಸೂರು ಬ್ರಾಂಡ್ನಲ್ಲಿ ಪ್ರಚಾರ ಮತ್ತು ಮಾರಾಟ ಮಾಡಲಾಗುತ್ತಿತ್ತು. ಅದೇ ಮಾದರಿಯಲ್ಲಿ ಇಂದು ಮೋದಿ ಸರ್ಕಾರವು ಸ್ವದೇಶಿ ಉತ್ಪನ್ನಗಳ ಬಳಕೆಗೆ ಆದ್ಯತೆಯನ್ನು ನೀಡುತ್ತಿದೆ.
ದೇಶವನ್ನೇ ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪಣತೊಟ್ಟಿದೆ ಎಂದು ಹೇಳಿದರು. ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಚುನಾವಣೆಯ ಯುದ್ಧಕ್ಕೆ ದೇಶವೇ ಸಜ್ಜಾಗಿದೆ. ದೇಶದ ಸುಧಾರಣೆಗಾಗಿ ಮೋದಿ ಸರ್ಕಾರದ ಗೆಲುವಿಗೆ ಕಾರ್ಯಕರ್ತರು ಪರಿಶ್ರಮ ಪಡಬೇಕಾಗಿದೆ.
ಕೊಡಗಿನಲ್ಲಿ ಬಿಜೆಪಿ ಸರ್ಕಾರದ ೨೦ ವರ್ಷಗಳ ಅವಧಿಯಲ್ಲಿ ಪ್ರತಿ ಕಾಲೋನಿಗಳಿಗೆ ಕಾಂಕ್ರೀಟ್ ರಸ್ತೆಯನ್ನು ಕೊಟ್ಟ ಹೆಗ್ಗಳಿಕೆ ಇದೆ. ಕುಡಿಯುವ ನೀರು, ಶೌಚಾಲಯ, ಸಮುದಾಯ ಭವನ, ದೇವಸ್ಥಾನ, ಚರ್ಚ್, ಮಸೀದಿಗಳ ಅಭಿವೃದ್ಧಿಯು ನಿರಂತರವಾಗಿ ನಡೆದಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಮಂಡೆಪAಡ ಸುಜಾ ಕುಶಾಲಪ್ಪ ಮಾತನಾಡಿ, ದೇಶದ ಭದ್ರತೆಗಾಗಿ ಮತ್ತು ಉಳಿವಿಗಾಗಿ ಮೋದಿ ಸರ್ಕಾರವನ್ನು ಬೆಂಬಲಿಸುವ ಅಗತ್ಯ ಇದೆ ಎಂದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವೀರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ಜಿಲ್ಲಾ ಉಪಾಧ್ಯಕ್ಷ ಕಿಲನ್ ಗಣಪತಿ, ರಾಜ್ಯ ಶಿಸ್ತು ಸಮಿತಿ ಸದಸ್ಯ ಪಟ್ಟಡ ರೀನಾ ಪ್ರಕಾಶ್, ಮಾಪಂಗಡ ಯಮುನಾ ಚಂಗಪ್ಪ, ಚುನಾವಣಾ ಉಸ್ತುವಾರಿಗಳಾದ ಡಾ. ವಿಕಾಸ್, ಡಾ. ವಸಂತ್ ಕುಮಾರ್, ಪಕ್ಷದ ಮುಖಂಡ ಅಡ್ಡಂಡ ಕಾರ್ಯಪ್ಪ, ಕುಂಞAಗಡ ಅರುಣ್ ಭೀಮಯ್ಯ, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು ಗಣಪತಿ, ಶಕ್ತಿ ಕೇಂದ್ರ ಪ್ರಮುಖರು, ಸಹ ಪ್ರಮುಖರು, ಭೂತ್ ಅಧ್ಯಕ್ಷರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.