ಕೂಡಿಗೆ, ಮಾ. ೨೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮದಲ್ಲಿರುವ ಶ್ರೀ ಮಾತಾ ದಂಡಿನ ಚೌಡೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನೆರವೇರಿತು.

ಗಣಪತಿ ಹೋಮ, ದುರ್ಗ ಹೋಮ, ನವಕಲಶ ಸ್ಥಾಪನೆ, ಪಂಚಾಮೃತ ಅಭಿಷೇಕ, ಮಹಾಪೂಜೆ, ಮಹಾ ಮಂಗಳಾತಿ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಪಂಡಿತ್ ಮಂಜುನಾಥ ತಂಡದವರಿAದ ನಡೆದವು.

ಪೂಜಾ ಕಾರ್ಯಕ್ರಮದಲ್ಲಿ ಕೂಡುಮಂಗಳೂರು, ಕೂಡಿಗೆ, ಕುಶಾಲನಗರ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯವು ದೇವಸ್ಥಾನ ಸಮಿತಿಯ ವತಿಯಿಂದ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಸಮಿತಿಯ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.