ಮಡಿಕೇರಿ, ಮಾ. ೨೬: ಹಿರಿಯ ಸಾಹಿತಿ ನಾ.ಡಿಸೋಜ ಅವರ ಎಲ್ಲಾ ಲೇಖನಗಳು ಸಮಾಜಮುಖಿಯಾಗಿವೆ ಎಂದು ಸಾಹಿತಿ, ಕಲಾವಿದೆ ಮತ್ತು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಮಿಲನಾ ಭರತ್ ಹೇಳಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಇನ್ಸಿ÷್ಟಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಆಶ್ರಯದಲ್ಲಿ ಇಲ್ಲಿನ ಸಹಕಾರಿ ಡಿಪ್ಲೋಮ ತರಬೇತಿ ಕೇಂದ್ರದಲ್ಲಿ ನಡೆದ ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ, ಕಥಾ ಸ್ಪರ್ಧೆ ಮತ್ತು ನಾಟಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಲೆನಾಡಿನ ಹಸಿರ ಪರಿಸರವನ್ನೆ ಕೇಂದ್ರವಾಗಿಟ್ಟುಕೊAಡು ಅವರು ಬರೆದ ದ್ವೀಪ , ನಡುವೆ ನಿಂತ ಜನ , ಮಂಜುಗೆಡ್ಡೆ, ಕಾಡಿನ ಬೆಂಕಿ, ಒಂದು ಜಲಪಾತದ ಸುತ್ತ ಮತ್ತು ಈ ನೆಲ ಈ ಜಲದಂತಹ ಕಾದಂಬರಿಗಳು ಸದ್ದಿಲ್ಲದೇ ಜಾಗೃತಿಯ ಬೆಳೆ ಬೆಳೆಯುತ್ತಾ ಕ್ರಾಂತಿಯ ಹೊಳೆ ಹರಿಸುವಂತೆ ಮಾಡಿವೆ ಎಂದು ಅವರು ಹೇಳಿದರು.
ನಾವಿರುವ ಸ್ಥಳದಲ್ಲಿಯೇ ನಮ್ಮ ಪ್ರಕೃತಿ, ಪರಿಸರ, ಜನಜೀವನ, ಬದುಕು ಗ್ರಾಮೀಣ ಜಾನಪದ ಕಲೆಗಳ ಕುರಿತಂತೆ ಲೇಖನಗಳನ್ನು ಬರೆಯಲು ವಿದ್ಯಾರ್ಥಿಗಳು ಮುಂದಾಗಬೇಕೆAದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾ.ಡಿಸೋಜ ಎಂದರೆ, ನಾಡು ಮೆಚ್ಚಿದ ಪ್ರಖ್ಯಾತ ಸಾಹಿತಿಯಷ್ಟೆ ಅಲ್ಲ. ಅತ್ಯಂತ ಪ್ರಕರವಾದ ವೈಚಾರಿಕ ಪ್ರಜ್ಞೆಯ ಚಿಂತಕ, ಸರ್ವ ಧÀರ್ಮ ಸಮಭಾವದ ಪ್ರತಿಪಾದಕ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸ್ಥೆಯ ಪ್ರಾಚಾರ್ಯರಾದ ಡಾ. ಆರ್.ಎಸ್. ರೇಣುಕಾ, ಕನ್ನಡ ಸಾಹಿತ್ಯ ಬೆಳೆದು ಬಂದ ಹಿನ್ನೆಲೆಯ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಡಿಕೇರಿ ತಾಲೂಕು ಕ.ಸಾ.ಪ. ಮಾಜಿ ಅಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ೨೦೧೪ರಲ್ಲಿ ಮಡಿಕೇರಿಯಲ್ಲಿ ನಡೆಸಿದಾಗ ಸಮ್ಮೇಳನದ ಅಧ್ಯಕ್ಷರಾಗಿ ನಾ. ಡಿಸೋಜ ಅವರು ಪಾಲ್ಗೊಂಡಿದ್ದನ್ನು ಸ್ಮರಿಸಿದರು.
ವೇದಿಕೆಯಲ್ಲಿ ಜಿಲ್ಲಾ ಗೌ.ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ಉಪಸ್ಥಿತರಿದ್ದರು. ರಶ್ಮಿತಾ ಕಾರ್ಯಕ್ರಮ ನಿರೂಪಿಸಿ, ಹರೀಶ್ ಸ್ವಾಗತಿಸಿ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಪತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ವಂದಿಸಿದರು.