ಮಡಿಕೇರಿ, ಮಾ. ೨೬: ದೇಶಾದ್ಯಂತ ಲೋಕಸಭೆ ಚುನಾವಣೆ ರಂಗುಪಡೆದುಕೊAಡಿದ್ದು, ಅತ್ಯಂತ ಕೌತುಕವನ್ನು ಸೃಷ್ಟಿಸಿ ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿರುವ ಕೊಡಗು-ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇದೀಗ ಪ್ರಚಾರದ ಅಖಾಡಕ್ಕಿಳಿಯುವ ಮೂಲಕ ‘ಲೋಕ ಕಣ'ದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಬಿರುಸುಗೊಂಡAತಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಗೌಡ ತಲಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ತಮ್ಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಕೊಡಗಿನ ಶಾಸಕದ್ವಯರು ಹಾಗೂ ಕಾರ್ಯ ಸಲ್ಲಿಸಿ ತಮ್ಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಕೊಡಗಿನ ಶಾಸಕದ್ವಯರು ಹಾಗೂ ಕಾರ್ಯ ಕರ್ತರ ಜೊತೆಗೆ ಆಗಮಿಸಿದ ಲಕ್ಷö್ಮಣ್ ಅವರು ಮೊದಲು ಭಾಗಮಂಡಲ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾವೇರಿ ಉಗಮಸ್ಥಳ ತಲಕಾವೇರಿಯ ಮಹಾಗಣಪತಿ, ಅಗಸ್ತೆö್ಯÃಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಕಾವೇರಿ ಕುಂಡಿಕೆಗೂ ಪೂಜೆ ನೆರವೇರಿಸಿ ಗೆಲುವಿಗಾಗಿ ಪ್ರಾರ್ಥನೆ ನಡೆಸಿದರು.

ಮುಖ್ಯಮಂತ್ರಿ ಸ್ವಕ್ಷೇತ್ರ - ಬಿಜೆಪಿಗೆ ಪ್ರತಿಷ್ಠಿತ ಕ್ಷೇತ್ರ ಎಂಬ ಕಾರಣಕ್ಕೆ ಅತ್ಯಂತ ಕೌತುಕಕ್ಕೆ ಕಾರಣವಾಗಿರುವ ಕೊಡಗು-ಮೈಸೂರು ಕ್ಷೇತ್ರದಲ್ಲಿ ಗೆಲುವಿಗಾಗಿ ಜಿದ್ದಾಜಿದ್ದಿ ತೀವ್ರ ಗೊಂಡಿದೆ. ಪ್ರಾಬಲ್ಯ ಹಾಗೂ ದೌರ್ಬಲ್ಯದ ಲೆಕ್ಕಾಚಾರಗಳು ನಡೆಯುತ್ತಿದ್ದು, ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಲೋಕಸಭೆಯಲ್ಲಿ ಗೆಲುವಿಗಾಗಿ ಉಭಯ ಪಕ್ಷಗಳು ಕಸರತ್ತು ಮುಂದುವರೆಸುತ್ತಿವೆ.

ಈ ಸಂದರ್ಭ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಹೆಚ್.ಎಸ್. ಚಂದ್ರಮೌಳಿ ಜಿಲ್ಲಾ ವಕ್ತಾರ ಅಪ್ಪಟ್ಟೀರ ಟಾಟು ಮೊಣ್ಣಪ್ಪ, ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ವೀರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ತೋರೆರ ಪೊನ್ನಕ್ಕಿ, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಬಿದ್ದಾಟಂಡ ತಮ್ಮಯ್ಯ, ಚಾಚಮಂಡ ಲವಚಿಣ್ಣಪ್ಪ, ಮುಕ್ಕಾಟೀರ ಕಾವೇರಮ್ಮ ಸೇರಿದಂತೆ ಇನ್ನಿತರರು ಹಾಜರಿದ್ದರು.

ಪರಿಸರ ಸ್ನೇಹಿ ಪ್ರವಾಸೋದ್ಯಮದ ಕನಸು

ತಲಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್, ಟಿಕೆಟ್ ಘೋಷಣೆಯಾದ ಬಳಿಕ ಕಾವೇರಿ ತಾಯಿಯ ಆಶೀರ್ವಾದದ ಮೂಲಕ ಪ್ರಚಾರವನ್ನು ಕೊಡಗು ಜಿಲ್ಲೆಯಲ್ಲಿ ಆರಂಭಿಸಿದ್ದೇನೆ. ತಾ. ೨೭ ರಂದು ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪೂಜೆ ಬಳಿಕ ಮೈಸೂರಿನಲ್ಲಿ ಪ್ರಚಾರ ಆರಂಭಿಸಲಿದ್ದೇನೆ. ಕೊಡಗು-ಮೈಸೂರು ಕ್ಷೇತ್ರಕ್ಕೆ ತನ್ನಂತ ಸಾಮಾನ್ಯ ಕಾರ್ಯಕರ್ತನನ್ನು ಆಯ್ಕೆ ಮಾಡಿರುವುದು ಜವಾಬ್ದಾರಿ ಹೆಚ್ಚಿಸಿದೆ. ಗೆಲ್ಲಲು ಕಾರ್ಯಕರ್ತರು, ನಾಯಕರು ಶ್ರಮವಹಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಈ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕಳೆದ ೧೦ ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ‘ಕೊಡಗನ್ನು ಸ್ವಿಜರ್ ಲ್ಯಾಂಡ್, ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ’ ಎಂದು ಮೋದಿ ಹೇಳಿದ್ದರು. ಆದರೆ ಪರಿಸ್ಥಿತಿ ಮೊದಲಿನಂತೇ ಇದೆ. ಕೇಂದ್ರದ ಯೋಜನೆಯನ್ನು ಕ್ಷೇತ್ರಕ್ಕೆ ತರುತ್ತೇನೆ. ರಾಜ್ಯ ಸರಕಾರದ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಸರಕಾರ, ಸ್ಥಳೀಯ ಶಾಸಕರ ಸಹಕಾರವಿಲ್ಲದಿದ್ದರೆ ಕೇಂದ್ರದ ಯೋಜನೆ ತರಲಾಗುವುದಿಲ್ಲ. ಇಂಡಿಯಾ ಒಕ್ಕೂಟ ಸರಕಾರ ಈ ಬಾರಿ ಅಸ್ತಿತ್ವಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬಲವರ್ದನೆಗೆ ಯೋಜನೆಗಳ ಅವಶ್ಯಕತೆ ಇದೆ. ಕೆಲವು ರಾಷ್ಟçಗಳಲ್ಲಿ ಪ್ರವಾಸೋದ್ಯಮದಿಂದಲೇ ದೇಶ ಮುನ್ನಡೆಯುತ್ತಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮ ವಾತಾವರಣ ಸೃಷ್ಟಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ. ಮೈಸೂರಿನಲ್ಲಿ ಐಟಿ ಕಂಪೆನಿಗಳ ಅವಶ್ಯಕತೆ ಇದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶ ಸೃಷ್ಟಿಯಾಗಿ ನಿರುದ್ಯೋಗಿಗಳಿಗೆ ಆಶಾಕಿರಣವಾಗಲಿದೆ. ಇದಕ್ಕೆ ವ್ಯವಸ್ಥಿತ ಕಾರ್ಯಯೋಜನೆ ತರುವುದು ತನ್ನ ಉದ್ದೇಶ ಎಂದ ಲಕ್ಷö್ಮಣ್, ೧೦ ತಿಂಗಳಿನಲ್ಲಿ ರಾಜ್ಯ ಸರಕಾರ ಉತ್ತಮ ಕೆಲಸ ಮಾಡಿದೆ. ಕೊಡಗಿನ ಶಾಸಕರು ಪೈಪೋಟಿಯಲ್ಲಿ ಕೆಲಸ ಮಾಡಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿದ್ದಾರೆ. ಭಾಗಮಂಡಲದಲ್ಲಿ ಕೆಸರುಮಯ ವಾತಾವರಣ ಹೋಗಿ ಫ್ಲೋರಿಂಗ್ ಮಾಡಿ ಆಗಮಿಸುವವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ. ೨೫ ವರ್ಷಗಳ ನಂತರ ಕೊಡಗಿಗೆ ಮುಕ್ತಿ ದೊರೆತಿದೆ. ಮುಂದೆಯೂ ಕಾಂಗ್ರೆಸ್ ಜಿಲ್ಲೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲಿದೆ. ಕೊಡಗಿನಲ್ಲಿ ಶಾಂತಿ ನೆಲೆಸಿದೆ. ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಕರೆದುಕೊಂಡು ಹೋಗುತ್ತಿದ್ದೇವೆ ಎಂದರು.

ಕಳೆದ ೩೦ ವರ್ಷಗಳಿಂದ ಪಕ್ಷದಲ್ಲಿ ತೊಡಗಿಸಿಕೊಂಡಿದ್ದೇನೆ. ದಿನದ ೨೪ ಗಂಟೆ ಕ್ಷೇತ್ರದಲ್ಲಿ ಸಿಗುತ್ತೇನೆ. ೪ ಚುನಾವಣೆ ಸೋತಿದ್ದೇನೆ. ಈ ಬಾರಿ ಗೆಲ್ಲುವ ವಿಶ್ವಾಸವಿದೆ. ಜನಸಾಮಾನ್ಯರ ನಡುವೆ ನಾನಿರುತ್ತೇನೆ ಎಂದರು.

೪೭ ವರ್ಷದ ನಂತರ ಒಕ್ಕಲಿಗರಿಗೆ ಟಿಕೆಟ್

೪೭ ವರ್ಷದ ನಂತರ ಈ ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ದೊರೆತಿದೆ. ಬಿಜೆಪಿ ಒಕ್ಕಲಿಗ ಸಮುದಾಯವನ್ನು ತುಳಿಯುತ್ತಿದೆ. ಪ್ರತಾಪ್ ಸಿಂಹ, ಸಿ.ಟಿ.ರವಿ, ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೆಟ್ ನಿರಾಕರಿಸಿರುವುದು, ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆ ಇದಕ್ಕೆ ಉದಾಹರಣೆ ಎಂದು ಟೀಕಿಸಿದರು.