ಮಡಿಕೇರಿ, ಮಾ. ೨೭: ಸರಕಾರ ಘೋಷಣೆ ಮಾಡಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಮುಖ್ಯ ಮಂತ್ರಿಗಳು ತಡೆ ಮಾಡಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.

ಸರಕಾರ ನಿಗಮ ಮಂಡಳಿ ಸೇರಿದಂತೆ ವಿವಿಧ ಭಾಷಾ ಅಕಾಡೆಮಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಅದರಂತೆ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನೊಳಗೊಂಡ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೂ ಅಧ್ಯಕ್ಷರು ಹಾಗೂ ಕೆಲವು ಸದಸ್ಯರನ್ನು ನೇಮಕ ಮಾಡಲಾಗಿದೆ.